ಕಬಕ ಸ.ಪ.ಪೂರ್ವ ಕಾಲೇಜಿನಲ್ಲಿ ತಾಲೂಕು ಮಟ್ಟದ ಫುಟ್ಬಾಲ್ ಪಂದ್ಯಾಟ

0

ಪುತ್ತೂರು: ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಕಬಕ, ಇಲ್ಲಿ ಪುತ್ತೂರು ತಾಲೂಕು ಮಟ್ಟದ ಪ್ರೌಢ ಶಾಲಾ ವಿಭಾಗ ದ ಬಾಲಕ ಬಾಲಕಿಯರ ಫುಟ್ಬಾಲ್ ಪಂದ್ಯಾಟವು ಸೆ.9ರಂದು ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಕೃಷ್ಣಯ್ಯ ಇವರ ನೇತೃತ್ವದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಗ್ರಾಮ ಪಂಚಾಯತ್ ಕಬಕದ ಅಧ್ಯಕ್ಷೆ ಸುಶೀಲಾ ನೆರವೇರಿಸಿದರು.ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಎಮ್‌ ಪಿ ಅಬ್ಬಾಸ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಕಬಕ ಗ್ರಾಮ ಪಂಚಾಯತ್ ನ ಉಪಾಧ್ಯಕ್ಷರು, ಸದಸ್ಯರು, ತಾಲೂಕು ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ವಿಷ್ಣುಪ್ರಸಾದ್ ಸಿ , ಅಬ್ರಾಹಂ,ತಾಲೂಕು ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರು ಹಾಗೂ ಹಲವಾರು ಗಣ್ಯರು ಉಪಸ್ಥಿತರಿದ್ದರು. ಶಾಲಾ ಮುಖ್ಯಗುರುಗಳಾದ ಸುರೇಖಾ ಇವರು ಸ್ವಾಗತಿಸಿದರು, ಶಿಕ್ಷಕಿ ಸುಮಿತ್ರಾ ಇವರು ಧನ್ಯವಾದ ನೀಡಿದರು, ಶಿಕ್ಷಕಿ ಶಾಂತ ಇವರು ಕಾರ್ಯಕ್ರಮ ನಿರೂಪಿಸಿದರು.ಇತರ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಸಹಕರಿಸಿದರು.

LEAVE A REPLY

Please enter your comment!
Please enter your name here