ಇರ್ದೆ-ಬೆಟ್ಟಂಪಾಡಿ ಪ್ರಾ.ಕೃ.ಪತ್ತಿನ ಸಹಕಾರ ಸಂಘಕ್ಕೆ ರಾಜ್ಯ ಅಪೆಕ್ಸ್ ಬ್ಯಾಂಕ್‌ನ ಅಧಿಕಾರಿಗಳ ಭೇಟಿ

0

ಸಂಘದ ವ್ಯವಹಾರ, ಕಾರ್ಯಚಟುವಟಿಕೆಗೆ ಶ್ಲಾಘನೆ

ಪುತ್ತೂರು: ಇರ್ದೆ-ಬೆಟ್ಟಂಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ರಾಜ್ಯ ಅಪೆಕ್ಸ್ ಬ್ಯಾಂಕ್‌ನ ಡಿಜಿಎಮ್ ಮೃತ್ಯುಂಜಯ ಪಾಟೀಲ್, ಎಜಿಎಮ್ ನಾಗರಾಜಯ್ಯರವರು ಸೆ.13ರಂದು ಭೇಟಿ ನೀಡಿ ಸಂಘದ ಪ್ರಗತಿ ಪರಿಶೀಲನೆ ನಡೆಸಿದರು.


ಎಸ್‌ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು, ಸಂಘದ ಅಧ್ಯಕ್ಷ ರಂಗನಾಥ ರೈ ಗುತ್ತು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಮಯ್ಯ ರೈರವರು ಹೂಗುಚ್ಚ ನೀಡಿ ಸ್ವಾಗತಿಸಿ ಬರಮಾಡಿಕೊಂಡರು. ಸಂಘದ ಅಧ್ಯಕ್ಷ ರಂಗನಾಥ ರೈ ಗುತ್ತು ಸ್ವಾಗತಿಸಿ ಮಾತನಾಡಿ ಇರ್ದೆ ಬೆಟ್ಟಂಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ಇರ್ದೆ ಮತ್ತು ಬೆಟ್ಟಂಪಾಡಿ ಗ್ರಾಮದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ರೈತರಿಗೆ ಶೂನ್ಯ ಬಡ್ಡಿದರ, ೩ಶೇ. ಬಡ್ಡಿದರ ಹಾಗೂ ಕೃಷಿಯೇತರ ಸಾಲಗಳನ್ನು ನೀಡುತ್ತಿದೆ ಎಂದು ಹೇಳಿ ಸ್ವಾಗತಿಸಿದರು.

ಸಂಘದ ದಾಖಲೆ, ವ್ಯವಹಾರಗಳನ್ನು ಪರಿಶೀಲಿಸಿದ ಅಧಿಕಾರಿಗಳು ಸಂಘದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಸಂಘದ ಕಾರ್ಯಚಟುವಟಿಕೆ, ಠೇವಣಾತಿ, ಅಭಿವೃದ್ಧಿ, ಹಾಗೂ ಸಾಧನೆ ಬಗ್ಗೆ ಪ್ರಶಂಸೆಯ ಮಾತುಗಳನ್ನಾಡಿದರು. ಅಲ್ಲದೆ ಎಸ್‌ಸಿಡಿಸಿಸಿ ಬ್ಯಾಂಕ್ ರಾಷ್ಟ್ರಮಟ್ಟದಲ್ಲೆ ಗಣನೀಯ ಸಾಧನೆ ಮಾಡಿರುವುದನ್ನು ಪ್ರಧಾನ ಮಂತ್ರಿಗಳು ಶ್ಲಾಘಸಿದ್ದಾರೆ ಎಂದು ತಿಳಿಸಿದರು. ಸಂಘದ ಅಧ್ಯಕ್ಷರು ಮತ್ತು ಸಿಬ್ಬಂದಿಗಳಿಗೆ ತಮ್ಮ ಕೆಲಸ ಮತ್ತು ಜವಾಬ್ದಾರಿಯ ಬಗ್ಗೆ ಮಾರ್ಗದರ್ಶನ ಮಾಡಿದರು. ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಳ್ಯೊಟ್ಟು ಮೇಲ್ವಿಚಾರಕ ಶರತ್ ಡಿ, ವಸಂತ್, ಸಿಬಂದಿ ನವೀನ್, ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ರಾಮಯ್ಯ ರೈ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here