ಪುತ್ತೂರು: ಬೊಳುವಾರು ವಿಶ್ವಕರ್ಮ ಯುವ ಸಮಾಜ ಹಾಗೂ ವಿಶ್ವ ಬ್ರಾಹ್ಮಣ ಸಂಘದ ಜಂಟಿ ಆಶ್ರಯದಲ್ಲಿ ನಡೆಯುವ ವಿಶ್ವಕರ್ಮ ಪೂಜಾ ಮಹೋತ್ಸವದ ಪ್ರಯುಕ್ತ ವಿಶ್ವಕರ್ಮ ದೇವರ ಅಲಂಕೃತ ವಾಹನ ಮೆರವಣಿಗೆ ಸೆ.17ರಂದು ನಡೆಯಲಿದೆ.
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಿಂದ ಬೊಳುವಾರು ವಿಶ್ವಕರ್ಮ ಸಭಾಭವನದ ವರೆಗೆ ಮೆರವಣಿಗೆ ನಡೆಯಲಿದ್ದು, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಮೆರವಣಿಗೆಗೆ ಬೆಳಿಗ್ಗೆ 9 ಗಂಟೆಗೆ ಚಾಲನೆ ನೀಡಲಿದ್ದಾರೆ.
ಮೆರವಣಿಗೆಯಲ್ಲಿ ಭಾಗವಹಿಸುವ ವಿಶ್ವಕರ್ಮ ಸಮಾಜ ಬಾಂಧವರು ಬೆಳಿಗ್ಗೆ 8 ಗಂಟೆಗೆ ಶ್ರೀ ಮಹಾಲಿಂಗೇಶ್ಬರ ದೇವಸ್ಥಾನಲ್ಲಿ ಹಾಜರಿದ್ದು, ಭಾರತೀಯ ಸಂಸ್ಕೃತಿಯ ಉಡುಗೆ ತೊಡುಗೆ ಧರಿಸಬೇಕು. ವಿಶ್ವಕರ್ಮ ಪೂಜಾ ಮಹೋತ್ಸವದ ಅಂಗವಾಗಿ ಎಲ್ಲಾ ವಿಶ್ವಕರ್ಮ ಸಮಾಜ ಬಾಂಧವರು ತಮ್ಮ ವ್ಯಾಪಾರ, ವ್ಯವಹಾರಗಳಿಗೆ ಬಿಡುವು ನೀಡಿ ಭಾಗವಹಿಸಬೇಕು ಎಂದು ಸಂಘ ವಿನಂತಿಸಿದೆ.
ವಿದ್ಯಾರ್ಥಿ ವೇತನ, ಪ್ರತಿಭಾ ಪುರಸ್ಕಾರ
ಬೆಳಿಗ್ಗೆ 11 ಗಂಟೆಗೆ ನಡೆಯುವ ವಿದ್ಯಾರ್ಥಿ ವೇತನ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುತ್ತೂರು ವಿಶ್ವಕರ್ಮ ಯುವ ಸಮಾಜದ ಅಧ್ಯಕ್ಷ ಪ್ರಕಾಶ ಆಚಾರ್ಯ ಕೆ. ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಶಾಸಕ ಅಶೋಕ್ ಕುಮಾರ್ ರೈ, ಪುತ್ತೂರು ಉಪವಲಯ ಅರಣ್ಯಾಧಿಕಾರಿ ಶಿವಾನಂದ ಆಚಾರ್ಯ ಪಾಲ್ಗೊಳ್ಳಲಿದ್ದಾರೆ.
ಅಪರಾಹ್ನ 3 ಗಂಟೆಯಿಂದ ದ.ಕ.ಜಿಲ್ಲಾ ಶ್ರೀ ವಿಶ್ವಕರ್ಮ ಸಂಸ್ಕೃತಿ ಪ್ರಸಾರ ಪ್ರತಿಷ್ಠಾನದ ವತಿಯಿಂದ ಯಕ್ಷಗಾನ ಬಯಲಾಟ “ದೇವಶಿಲ್ಪಿ ವಿಶ್ವಕರ್ಮ” ಪ್ರದರ್ಶನಗೊಳ್ಳಲಿದೆ.