ಕ್ರೀಡಾ ಮನೋಭಾವ ವ್ಯಕ್ತಿಯ ವ್ಯಕ್ತಿತ್ವವನ್ನು ಅರಳಿಸುತ್ತದೆ-ಡಾ. ಕೃಷ್ಣ ಭಟ್ ಕೊಂಕೋಡಿ
ಪುತ್ತೂರು: ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಛೇರಿ ದಕ್ಷಿಣ ಕನ್ನಡ ಜಿಲ್ಲೆ, ಕ್ಷೇತ್ರ ಶಿಕ್ಷಣಾಧಿಕಾರಿ ಅವರ ಕಚೇರಿ ಪುತ್ತೂರು ತಾಲೂಕು ಹಾಗೂ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ಸಹಯೋಗದಲ್ಲಿ ವಿವೇಕಾನಂದ ಆಂಗ್ಲಮಾಧ್ಯಮ ಶಾಲಾ ಒಳಾಂಗಣ ಕ್ರೀಡಾಂಗಣದಲ್ಲಿ ಪ್ರೌಢಶಾಲಾ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟ ಜರುಗಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೃಷ್ಣ ಭಟ್ ಕೊಂಕೋಡಿ ಇವರು ಸಾರ್ವಜನಿಕ ಶಿಕ್ಷಣ ಇಲಾಖೆಯ ಅನ್ಯಾನ್ಯ ಕಾರ್ಯಕ್ರಮಗಳಿಗೆ ವಿವೇಕಾನಂದ ವಿದ್ಯಾಸಂಸ್ಥೆಗಳ ಸಹಾಯ ಸದಾ ಇದ್ದು, ಪಂದ್ಯಾಟವು ಎಲ್ಲಾ ಸ್ಪರ್ಧಾರ್ಥಿಗಳಲ್ಲೂ ಸ್ಪರ್ಧಾ ಮನೋಭಾವಕ್ಕಿಂತ ಹೆಚ್ಚು ದೈಹಿಕ, ಮಾನಸಿಕ ಹಾಗೂ ಬೌದ್ದಿಕ ಶಕ್ತಿಯನ್ನು ಬೆಳೆಸಲು ಸಹಕಾರಿಯಾಗಲಿ ಎಂದರು.
ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್ ಆರ್ ದೀಪ ಪ್ರಜ್ವಲನೆಯೊಂದಿಗೆ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಪಂದ್ಯಾಟದ ಯಶಸ್ಸು ದೈಹಿಕ ಶಿಕ್ಷಕರ, ತರಬೇತುದಾರರ ಹಾಗೂ ಸ್ಪರ್ಧಾರ್ಥಿಗಳ ಸಹಕಾರ ಮನೋಭಾವದಲ್ಲಿದೆ ಎಂದರು. ಪಂದ್ಯಾಂಗಣದಲ್ಲಿ ತೆಂಗಿನಕಾಯಿ ಹೊಡೆಯುವ ಮೂಲಕ ಪಂದ್ಯಾಟಕ್ಕೆ ಚಾಲನೆ ನೀಡಲಾಯಿತು.
ಸಭಾಧ್ಯಕ್ಷತೆಯ ವೇದಿಕೆಯಲ್ಲಿ ಜಿಲ್ಲಾ ದೈಹಿಕ ಶಿಕ್ಷಣ ನಿರ್ದೇಶಕ ಭುವನೇಶ್, ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕರೂ, ಮಹಾಲಿಂಗೇಶ್ವರ ಆಡಳಿತ ಸಮಿತಿಯ ಸದಸ್ಯರೂ ಆದ ಡಾ. ಸುಧಾ ರಾವ್, ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿಗಳಾದ ರೂಪಲೇಖ, ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ರಮೇಶ್ಚಂದ್ರ, ದೈಹಿಕ ಶಿಕ್ಷಣ ಸಂಘದ ಕಾರ್ಯದರ್ಶಿಗಳಾದ ಹರೀಶ್ ರೈ, ತಾಲೂಕು ಸಂಘದ ಅಧ್ಯಕ್ಷರಾದ ಕೆ ಸೀತಾರಾಮ ಗೌಡ, ಗ್ರೇಡ್ ೨ ರ ಅಧ್ಯಕ್ಷರಾದ ಸುಧಾಕರ ರೈ, ಪ್ರಾಥಮಿಕ ಶಾಲಾ ಸಹ ಶಿಕ್ಷಕ ಸಂಘದ ಅಧ್ಯಕ್ಷರಾದ ನವೀನ ರೈ, ಅಬ್ರಹಾಮ್, ರೇಡಿಯೋ ಪಾಂಚಜನ್ಯದ ಆಡಳಿತ ಸಮಿತಿಯ ಅಧ್ಯಕ್ಷರು ಸಂಪನ್ಮೂಲ ವ್ಯಕ್ತಿ ಕೃಷ್ಣವೇಣಿ ಮುಳಿಯ, ನ್ಯಾಯವಾದಿಗಳಾದ ಹರಿಣಾಕ್ಷಿ ಜೆ ಶೆಟ್ಟಿ, ಶಾಲಾ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾದ ಜಯಂತ, ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕರು ರಾಜ್ಯ ಪ್ರಶಸ್ತಿ ವಿಜೇತರು ಆದ ಶ್ರೀ ದಯಾನಂದ ಕೋರಮಂಡ, ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಆಡಳಿತ ಮಂಡಳಿ ಸಂಚಾಲಕರಾದ ರವಿನಾರಾಯಣ ಶಾಲಾ ಮುಖ್ಯಗುರು ಸತೀಶ್ ರೈ ಉಪಸ್ಥಿತರಿದ್ದರು.
ಜಿಲ್ಲಾ ದೈಹಿಕ ಶಿಕ್ಷಣ ನಿರ್ದೇಶಕ ಭುವನೇಶ ಪ್ರಾಸ್ತಾವಿಕ ಮಾತನಾಡಿದರು. ಮುಖ್ಯಗುರು ಆಶಾ ಬೆಳ್ಳಾರೆ ಸ್ವಾಗತಿಸಿ, ಶಾಲಾ ಸಂಚಾಲಕ ವಸಂತ ಸುವರ್ಣ ವಂದಿಸಿದರು,
ಜಿಲ್ಲೆಯ 7 ತಾಲೂಕುಗಳಿಂದ ಏಳು ಬಾಲಕರ ಹಾಗೂ ಏಳು ಬಾಲಕಿಯರ ತಂಡಗಳು ಪಂದ್ಯಾಟದಲ್ಲಿ ಭಾಗವಹಿಸಿ, ಬಾಲಕರ ವಿಭಾಗದಲ್ಲಿ ಪುತ್ತೂರು ತಾಲೂಕಿನ ಶ್ರೀ ರಾಮಕುಂಜೇಶ್ವರ ಪ್ರೌಢಶಾಲೆ ಪ್ರಥಮ, ಹಾಗೂ ಕೆ.ಪಿ.ಎಸ್ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ದ್ವಿತೀಯ ಸ್ಥಾನವನ್ನು ಪಡೆದುಕೊಂಡರು. ಬಾಲಕಿಯರ ವಿಭಾಗದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ಪ್ರಥಮ ಹಾಗೂ ಭಗವತಿ ಪ್ರೌಢಶಾಲೆ ಮಂಗಳೂರು ದಕ್ಷಿಣ ದ್ವಿತೀಯ ಸ್ಥಾನ ಪಡೆದುಕೊಂಡರು.
ಸಮಾರೋಪದ ಸಮಾಪನ ಮಾತುಗಳನ್ನಾಡಿದ ಪುತ್ತೂರಿನ ಪೋಲೀಸ್ ಸಬ್ ಇನ್ಸ್ಪೆಕ್ಟರ್ ಸೇಸಮ್ಮ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಿ ತಮ್ಮ ಶಾಲಾ ದಿನಗಳ ಕ್ರೀಡಾ ಭಾಗವಹಿಸುವಿಕೆಯ ಅನುಭವಗಳನ್ನು ಹಂಚಿಕೊಂಡರು. ವಿವೇಕಾನಂದ ಪದವಿ ಕಾಲೇಜಿನ ಪ್ರಾಂಶುಪಾಲ ವಿಷ್ಣು ಗಣಪತಿ ಭಟ್ ಮುಂದಿನ ಹಂತದ ಭಾಗವಹಿಸುವಿಕೆಗೆ ಶುಭ ಹಾರೈಸಿದರು. .