




ಸವಣೂರು: ಕಡಬ ತಾಲೂಕಿನ ಸವಣೂರು ಸ.ಪ.ಪೂ.ಕಾಲೇಜಿನ ಕ್ರೀಡಾಂಗಣದಲ್ಲಿ ಸೆ.24ರಂದು ನಡೆಯಲಿರುವ ಕಡಬ ತಾಲೂಕು ಮಟ್ಟದ ದಸರಾ ಕ್ರೀಡಾಕೂಟದ ಪೂರ್ವಭಾವಿ ಸಭೆ ಕಾಲೇಜಿನಲ್ಲಿ ನಡೆಯಿತು.



ಸಭೆಯ ಅಧ್ಯಕ್ಷತೆ ವಹಿಸಿದ್ದ ಕಡಬ ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್ ಮಾತನಾಡಿ,ಎಲ್ಲರ ಸಹಕಾರದಲ್ಲಿ ಸವಣೂರಿನಲ್ಲಿ ದಸರಾ ಕ್ರೀಡಾಕೂಟ ನಡೆಯಬೇಕು. ಯುವಕ ಮಂಡಲ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ನೆರವನ್ನು ಪಡೆದುಕೊಂಡು ಮಾದರಿ ಕ್ರೀಡಾಕೂಟವಾಗಿ ನಡೆಯಲಿ ಎಂದರು.






ಸುಳ್ಯ ಕ್ಷೇತ್ರದ ಅಕ್ರಮ ಸಕ್ರಮ ಸಮಿತಿ ಸದಸ್ಯ ರಾಕೇಶ್ ರೈ ಕೆಡೆಂಜಿ, ಸವಣೂರು ಗ್ರಾ.ಪಂ.ಅಧ್ಯಕ್ಷೆ ಸುಂದರಿ ಬಿ.ಎಸ್.,ಸದಸ್ಯರಾದ ಚಂದ್ರಾವತಿ ಸುಣ್ಣಾಜೆ, ರಫೀಕ್ ,ಅಬ್ದುಲ್ ರಝಾಕ್, ಗ್ರಾ.ಪಂ.ಲೆಕ್ಕ ಸಹಾಯಕ ಎ.ಮನ್ಮಥ, ಕಾಲೇಜಿನ ಅಭಿವೃದ್ದಿ ಸಮಿತಿಯ ಕಾರ್ಯಾಧ್ಯಕ್ಷ ಗಿರಿಶಂಕರ ಸುಲಾಯ,ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಅಶ್ವಿನ್ ಎಲ್.ಶೆಟ್ಟಿ, ಜಿಲ್ಲಾ ಯುವಜನ ಒಕ್ಕೂಟದ ಅಧ್ಯಕ್ಷ ಸುರೇಶ್ ರೈ ಸೂಡಿಮುಳ್ಳು ,ಕಡಬ ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷ ಮಹೇಶ್ ಕೆ.ಸವಣೂರು, ಸವಣೂರು ಪ.ಪೂ.ಕಾಲೇಜಿನ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ರಾಧಾಕೃಷ್ಣ ಓಡಂತರ್ಯ ,ಸವಣೂರು ಪ.ಪೂ.ಕಾಲೇಜಿನ ಪ್ರಾಚಾರ್ಯೆ ಪದ್ಮಾವತಿ ಎನ್.ಪಿ., ಪ್ರೌಢಶಾಲಾ ವಿಭಾಗದ ಮುಖ್ಯಸ್ಥ ರಘು ಬಿ.ಅರ್.,ಸವಣೂರು ಯುವಕ ಮಂಡಲದ ಅಧ್ಯಕ್ಷ ಜಿತಾಕ್ಷ ಜಿ.,ಮಾಜಿ ಅಧ್ಯಕ್ಷರಾದ ಸಚಿನ್ ಸವಣೂರು,ಪ್ರಕಾಶ್ ಮಾಲೆತ್ತಾರು, ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕಿ ಲಕ್ಷ್ಮೀ ಕೆ.ಟಿ.,ಸವಣೂರು ಸರಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಮಾಮಚ್ಚನ್ ಎಂ., ಸವಣೂರು ಉ.ಹಿ.ಪ್ರಾ.ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಬಾಲಕೃಷ್ಣ ಕೆ. ಸೇರಿದಂತೆ ವಿವಿಧ ಶಿಕ್ಷಣ ಸಂಸ್ಥೆಗಳ ದೈಹಿಕ ಶಿಕ್ಷಣ ಶಿಕ್ಷಕರು, ಕಾಲೇಜಿನ ಅಭಿವೃದ್ದಿ ಸಮಿತಿ ಸದಸ್ಯರು ಪಾಲ್ಗೊಂಡಿದ್ದರು.





