ಪುತ್ತೂರು: ಮುಂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2022-23ನೇ ಸಾಲಿನ ವಾರ್ಷಿಕ ಮಹಾಸಭೆ ಸೆ.23ರಂದು ಬೆಳಿಗ್ಗೆ ಗಂಟೆ 10.30ಕ್ಕೆ ಸರಿಯಾಗಿ ಮುಂಡೂರಿನಲ್ಲಿರುವ ಸಂಘದ ಕೇಂದ್ರ ಕಚೇರಿಯ ಸಭಾಭವನದಲ್ಲಿ ಸಂಘದ ಅಧ್ಯಕ್ಷ ಸುರೇಶ್ ಕುಮಾರ್ ಸೊರಕೆಯವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಸಭೆಗೆ ಸದಸ್ಯರೆಲ್ಲರೂ ಆಗಮಿಸಿ ಕಾರ್ಯಕಲಾಪಗಳಲ್ಲಿ ಭಾಗಿಗಳಾಗಬೇಕೆಂದು ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯಪ್ರಕಾಶ್ ರೈ ಸಿ ತಿಳಿಸಿದ್ದಾರೆ.