ನೆಲ್ಯಾಡಿ: ನೆಲ್ಯಾಡಿ ಗ್ರಾಮ ಪಂಚಾಯತ್ ನ ಅಂಗವಿಕಲರ ಪುನರ್ವಸತಿ ಕೇಂದ್ರ ಹಳೆಯ ಗ್ರಂಥಾಲಯ ಕಟ್ಟಡದಲ್ಲಿ ಉದ್ಘಾಟನೆಗೊಂಡಿತು.
ಗ್ರಾಮ ಪಂಚಾಯಿತಿ ಅಧ್ಯಕ್ಷ ಸಲಾಂ ಬಿಲಾಲ್ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ಪುನರ್ವಸತಿ ಕೇಂದ್ರ ಆರಂಭಕ್ಕೆ ಪಂಚಾಯತ್ ಈ ಹಿಂದೆಯೇ ಚಿಂತನೆ ನಡೆಸಿತ್ತು. ಇದೀಗ ಗ್ರಾಮ ಪಂಚಾಯಿತಿ ಗ್ರಂಥಾಲಯ ಇದ್ದ ಕಟ್ಟಡದಲ್ಲಿ ಕೇಂದ್ರ ಆರಂಭಿಸಲಾಗಿದೆ. ವಿಕಲಚೇತನರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು. ಉಪಾಧ್ಯಕ್ಷೆ ರೇಷ್ಮಾ ಶಶಿ, ಸದಸ್ಯ ಜಯಾನಂದ ಬಂಟ್ರಿಯಾಲ್ ಸಂದರ್ಭೋಚಿತವಾಗಿ ಮಾತನಾಡಿದರು. ಕಡಬ ತಾಲೂಕು ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತೆ ಅಕ್ಷತಾ ಮಾಹಿತಿ ನೀಡಿದರು.
ನೆಲ್ಯಾಡಿ ಗ್ರಾಮ ಪಂಚಾಯಿತಿ ಸದಸ್ಯರಾದ ರವಿಪ್ರಸಾದ್ ಶೆಟ್ಟಿ, ಪ್ರಕಾಶ್ ಕೆ., ಅಬ್ದುಲ್ ಜಬ್ಬಾರ್, ಮಹಮ್ಮದ್ ಇಕ್ಬಾಲ್, ಮಾಜಿ ಸದಸ್ಯೆ ಲೈಲಾತೋಮಸ್, ಸಿಬ್ಬಂದಿ ಗಳಾದ ಶಿವಪ್ರಸಾದ್, ಸೋಮಶೇಖರ, ಅಬ್ದುಲ್ ರಹಿಮಾನ್, ಗ್ರಾಮಸ್ಥರು ಉಪಸ್ಥಿತರಿದ್ದರು.ನೆಲ್ಯಾಡಿ ಗ್ರಾಮ ಪಂಚಾಯತ್ ಲೆಕ್ಕ ಸಹಾಯಕ ಅಂಗು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆ ನೆಲ್ಯಾಡಿ ಗ್ರಾಮ ಪಂಚಾಯಿತಿಯ ಸಹನಾ ಆರ್ ವಂದಿಸಿದರು.