ಇಂದಿನಿಂದ ಸೆ.30ರವರೆಗೆ ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಕೆಲಸದ ಅವಧಿ ವಿಸ್ತರಣೆ

0

ಬೆಳಿಗ್ಗೆ 8 ರಿಂದ
ರಾತ್ರಿ8 ರ ತನಕ

ಕಚೇರಿ ಕಾರ್ಯನಿರ್ವಹಣೆ
ನಾಲ್ಕನೇ ಶನಿವಾರ
ದಿನವಾದ ಸೆ.23ರಂದೂಕಚೇರಿಗೆ ರಜೆಯಿಲ್ಲ

ಬೆಂಗಳೂರು: ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕೇಂದ್ರ ಮೌಲ್ಯ ಮಾಪನ ಸಮಿತಿಯ 2023-24ನೇ ಸಾಲಿನಲ್ಲಿ ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯ ಮಾರ್ಗಸೂಚಿ ದರಗಳ ಪರಿಷ್ಕರಣೆ ಹಿನ್ನೆಲೆ, ದಸ್ತಾವೇಜುಗಳ ಸಂಖ್ಯೆ ಹೆಚ್ಚುವ ಕಾರಣ ಎಲ್ಲ ಉಪನೋಂದಣಿ ಕಚೇರಿಗಳ ಕೆಲಸದ ಅವಧಿಯನ್ನು ಸೆ.23 ರಿಂದ ಬೆಳಗ್ಗೆ 8 ರಿಂದ ರಾತ್ರಿ 8 ರವರೆಗೆ ಕಾರ್ಯ ನಿರ್ವಹಿಸಲು ಅವಧಿ ವಿಸ್ತರಿಸಿ ಆದೇಶಿಸಲಾಗಿದೆ.
ಮುಂದಿನ ದಿನಗಳಲ್ಲಿ ನೋಂದಣಿಗೆ ಹಾಜರುಪಡಿಸುವ ದಸ್ತಾವೇಜುಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದ್ದು, ಸಾರ್ವಜನಿಕ ಹಿತದೃಷ್ಟಿಯಿಂದ ಸೆ23 ರ ನಾಲ್ಕನೆ ಶನಿವಾರದಂದೂ ಈ ಅವಧಿಯಲ್ಲಿ ಕಾರ್ಯನಿರ್ವಹಿಸಬೇಕು.ಈ ಕೆಲಸದ ಅವಧಿಯು ಸೆ.30 ರವರೆಗೆ ಮಾತ್ರ ಜಾರಿಯಲ್ಲಿರುತ್ತದೆ.ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದು ಎಂದು ನೋಂದಣಿ ಮಹಾಪರಿವೀಕ್ಷಕರು ಮತ್ತು ಮುದ್ರಾಂಕಗಳ ಆಯುಕ್ತೆ ಬಿ.ಆರ್.ಮಮತಾ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here