ದಾಸಕೋಡಿ: ಲಾರಿ ಪಲ್ಟಿ – ಇಬ್ಬರು ಅಪಾಯದಿಂದ ಪಾರು

0

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ರಸ್ತೆ ಬದಿಯ ಚರಂಡಿಗೆ ಬಿದ್ದ ಘಟನೆ ಸೆ.22ರಂದು ಮುಂಜಾನೆ ವೇಳೆ ದಾಸಕೋಡಿ ಎಂಬಲ್ಲಿ ನಡೆದಿದೆ. ಅದರೊಳಗಿದ್ದ ಚಾಲಕ ಮತ್ತು ಕ್ಲೀನರ್ ಅಲ್ಪಸ್ವಲ್ಪ ಪ್ರಮಾಣದ ಗಾಯಗಳೊಂದಿಗೆ ಪಾರಾಗಿದ್ದಾರೆ. ಆರಿಫ್ ಹಾಗೂ ರಿಯಾಜ್ ಗಾಯಗೊಂಡವರು. ಬೆಂಗಳೂರು ಕಡೆಯಿಂದ ಮಂಗಳೂರಿಗೆ ಇದ್ದಿಲು ಸಾಗಾಟ ಮಾಡುತ್ತಿದ್ದ ಲಾರಿ ಕಲ್ಲಡ್ಕ ಸಮೀಪದ ದಾಸಕೋಡಿ ಎಂಬಲ್ಲಿ ಚರಂಡಿಗೆ ಬಿದ್ದಿದೆ. ಮುಂಜಾನೆ ಸುಮಾರು 4.30 ರವೇಳೆ ಈ ಘಟನೆ ನಡೆದಿದೆ. ಘಟನೆ ನಡೆದ ಕೂಡಲೇ ಲಾರಿಯೊಳಗಿದ್ದ ಇಬ್ಬರು ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ. ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೋಲೀಸರು ಭೇಟಿ ನೀಡಿದ್ದಾರೆ.

LEAVE A REPLY

Please enter your comment!
Please enter your name here