57.43 ಕೋಟಿ ರೂ. ವ್ಯವಹಾರ, ರೂ. 11 ಕೋಟಿ ಸಾಲ ವಿತರಣೆ, ಶೇ 76.02. ಸಾಲ ವಸೂಲಾತಿ- ಭಾಸ್ಕರ ಎಸ್.ಗೌಡ ಇಚ್ಲಂಪಾಡಿ
ಪುತ್ತೂರು: ಪುತ್ತೂರು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ(ಪಿಎಲ್ಡಿ) ಬ್ಯಾಂಕ್ 2022-23ನೇ ಸಾಲಿನಲ್ಲಿ 57.43 ಕೋಟಿ ರೂ.ಗಳ ವ್ಯವಹಾರವನ್ನು ನಡೆಸಿ, ರೂ. 11 ಕೋಟಿ ಸಾಲವನ್ನು ವಿತರಣೆ ಮಾಡಲಾಗಿದ್ದು, ಶೇ 76.02. ಸಾಲ ವಸೂಲಾತಿಯಾಗಿದೆ. ಬ್ಯಾಂಕ್ ಸಹಕಾರ ಕ್ಷೇತ್ರದಲ್ಲಿ ಸಾಧನೆಯನ್ನು ಮಾಡಿದೆ ಎಂದು ಬ್ಯಾಂಕಿನ ಅಧ್ಯಕ್ಷ ಭಾಸ್ಕರ ಎಸ್.ಗೌಡ ಇಚ್ಲಂಪಾಡಿರವರು ಹೇಳಿದರು.
ಸೆ. 23 ರಂದು ಪುತ್ತೂರು ಸಹಕಾರಿ ಟೌನ್ ಬ್ಯಾಂಕಿನ ಸಭಾಂಗಣದಲ್ಲಿ ಜರಗಿದ ಬ್ಯಾಂಕ್ನ 85ನೇ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಾಲ ವಸೂಲಾತಿಯಲ್ಲಿ ದ.ಕ.ಜಿಲ್ಲೆಯ ಪ್ರಾಥಮಿಕ ಬ್ಯಾಂಕ್ಗಳ ಪೈಕಿ ಅತೀ ಹೆಚ್ಚು ಸಾಲ ವಿತರಣೆ ಮಾಡುವ ಬ್ಯಾಂಕ್ ಎಂದು ಗುರುತಿಸಿಕೊಂಡಿರುವುದು ನಮ್ಮ ಸಂಸ್ಥೆಗೆ ಗೌರವವನ್ನು ತಂದಿದೆ ಎಂದು ಹೇಳಿದರು.
ಹೊಸ ಸಾಲವನ್ನು ನೀಡಲಾಗುವುದು-
ಸುಸ್ತಿದಾರರ ಬಳಿಗೆ ಬ್ಯಾಂಕಿನ ಆಡಳಿತ ಮಂಡಳಿ ಮತ್ತು ಸಿಬ್ಬಂದಿಗಳು ತೆರಳಿ, ಅವರ ಮನ ಒಲಿಸಿ, ಸಾಲವನ್ನು ಮರುಪಾವತಿಸುವಂತೆ ಮಾಡಿ, ಬಳಿಕ ಅವರಿಗೆ ಹೊಸ ಸಾಲವನ್ನು ನೀಡಲಾಗುವುದು ಎಂದು ಅಧ್ಯಕ್ಷ ಭಾಸ್ಕರ್ ಎಸ್. ಗೌಡರವರು ತಿಳಿಸಿದರು.
ಯಶಸ್ವಿನಿ ಯೋಜನೆಯ ಸೌಲಭ್ಯ ಪುತ್ತೂರಿನಲ್ಲಿ ದೊರೆಯುವಂತೆ ಸದಸ್ಯರ ಆಗ್ರಹ
ಯಶಸ್ವಿನಿ ಯೋಜನೆಯ ಸದಸ್ಯರಿಗೆ ಅನಾರೋಗ್ಯ ಬಂದಲ್ಲಿ ಆವರ ಚಿಕಿತ್ಯೆಗೆ ಸೌಲಭ್ಯ ಪುತ್ತೂರಿನ ಯಾವುದೇ ಆಸ್ಪತ್ರೆಯಲ್ಲಿ ಇರುವುದಿಲ್ಲ.ಈ ಹಿಂದೆ ಪುತ್ತೂರಿನ ಆಸ್ಪತ್ರೆಯಲ್ಲಿ ಇತ್ತು. ಈಗ ಈ ಸೌಲಭ್ಯ ಮಂಗಳೂರಿನ ಆಸ್ಪತ್ರೆಗೆ ಮಾತ್ರ ಸೀಮಿತವಾಗಿರುವುದರಿಂದ ಇದರ ಫಲಾನುಭವಿಗಳಿಗೆ ತುಂಬಾ ತೊಂದರೆ ಆಗಿದ್ದು, ಇದರ ಬಗ್ಗೆ ಗಮನ ಹರಿಸುವಂತೆ ಸದಸ್ಯರುಗಳು ಆಗ್ರಹಿಸಿದರು. ಇದಕ್ಕೆ ಉತ್ತರಿಸಿದ ಅಧ್ಯಕ್ಷರು ಯೋಜನೆಯ ಸೌಲಭ್ಯವನ್ನು ಪುತ್ತೂರಿನ ಆಸ್ಪತ್ರೆಯಲ್ಲಿ ದೊರೆಯುವಂತೆ ಮಾಡುವಲ್ಲಿ ಸಂಬಂಧ ಪಟ್ಟ ಇಲಾಖೆಯ ಅಧಿಕಾರಿಗಳಲ್ಲಿ ಒತ್ತಾಯಿಸಲಾಗುವುದು. ಈ ಬಗ್ಗೆ ನಿರ್ಣಯವನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು.
ಸಂಘದ ಮಾಜಿ ಅಧ್ಯಕ್ಷ ಬಾಲಕೃಷ್ಣ ಬೋರ್ಕರ್, ಸದಸ್ಯರುಗಳಾದ ಯಶೋಧರ್ ಜೈನ್, ಯತೀಂದ್ರ ಕೊಚ್ಚಿ, ಮೋಹನ್ ಪಕ್ಕಳ ಕುಂಡಾಪು, ಗಣೇಶ್ ಉದನಡ್ಕ, ಶಶಿಕಿರಣ್ ರೈ ನೂಜಿಬೈಲು, ಅಬ್ದುಲ್ ಖಾದರ್ ಕರ್ನೂರು, ಪಟೇಲ್ ಗೋಪಾಲಕೃಷ್ಣ ಗೌಡ ಚಾರ್ವಾಕ, ಹರೀಶ್ ಬಿಜತ್ರೆ, ವಿಕ್ರಂ ರೈ ಸಾಂತ್ಯ, ಬಾಬು ಎನ್ ಸವಣೂರು ರವರುಗಳು ವಿವಿಧ ಸಲಹೆ ಸೂಚನೆಯನ್ನು ನೀಡಿದರು.
ಅಭಿನಂದನೆ:
ಸದ್ರಿ ಬ್ಯಾಂಕಿನ ಸದಸ್ಯರ ಮಕ್ಕಳು 2022-23ನೇ ಸಾಲಿನ ವರ್ಷದಲ್ಲಿ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೇಯಲ್ಲಿ ಅತೀ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಾದ( ಇಂಗ್ಲೀಷ್ ಮಾಧ್ಯಮ) ಪ್ರಥಮ- ಸುಕೇಶ್ ಕೊಳ್ತಿಗೆ, ದ್ವಿತೀಯ ಸಹನ್ ಕೆ.ಎಲ್ ಪಡುವನ್ನೂರುರವರುಗಳಿಗೆ ಪ್ರತಿಭಾ ಪುರಸ್ಕಾರವನ್ನು ನೀಡಲಾಯಿತು.
ವೇದಿಕೆಯಲ್ಲಿ ಬ್ಯಾಂಕಿನ ಉಪಾಧ್ಯಕ್ಷೆ ಸುಜಾತ ರಂಜನ್ ರೈ, ನಿರ್ದೇಶಕರುಗಳಾದ ರಾಜಶೇಖರ್ ಜೈನ್ ಎನ್, ಎ.ಬಿ.ಮನೋಹರ ರೈ, ನಾರಾಯಣ ಕನ್ಯಾನ, ಯುವರಾಜ ಪೆರಿಯತ್ತೋಡಿ, ಪ್ರವೀಣ್ ರೈ ಪಂಜೊಟ್ಟು, ದೇವಯ್ಯ ಗೌಡ, ಉಮೇಶ್ ನಾಕ್, ಧರ್ಣಪ್ಪ ಮೂಲ್ಯ, ಮೀನಾಕ್ಷಿ , ಸೋಮಪ್ಪ ನಾಯ್ಕ ಎಸ್., ಶೀನ ನಾಯ್ಕ ಉಪಸ್ಥಿತರಿದ್ದರು.
ಸಮಾರಂಭದಲ್ಲಿ ಪುತ್ತೂರು ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಎಸ್.ಬಿ.ಜಯರಾಮ ರೈ ಬಳೆಜ್ಜ, ಮಾಜಿ ಉಪಾಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು, , ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲ ಸಮಿತಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಪುತ್ತೂರು ಟಿಎಪಿಸಿಎಂಎಸ್ ಅಧ್ಯಕ್ಷ ಕೃಷ್ಣಕುಮಾರ್ ರೈ ಕೆದಂಬಾಡಿಗುತ್ತು, ಪಿಎಲ್ಡಿ ಬ್ಯಾಂಕಿನ ಮಾಜಿ ವ್ಯವಸ್ಥಾಪಕ ಬಾಲಕೃಷ್ಣ ಪಿ, ಪುತ್ತೂರು ಬಂಟಸಿರಿ ವಿವಿಧೋದ್ದೇಶ ಸಹಕಾರ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಸತೀಶ್ ರೈ ನಡುಬೈಲು ಸೇರಿದಂತೆ ಸಾವಿರಾರು ಮಂದಿ ಸಂಘದ ಸದಸ್ಯರುಗಳು ಭಾಗವಹಿಸಿದರು.
ಮೊಳಹಳ್ಳಿ ಶಿವರಾಯ ಪ್ರತಿಮೆಗೆ ಹಾರಾರ್ಪಣೆ
ಮಹಾಸಭೆ ಆರಂಭವಾಗುವ ಮುನ್ನಾ ಸಹಕಾರ ರಂಗದ ಪಿತಾಮಹಾ ಮೊಳಹಳ್ಳಿ ಶಿವರಾಯರವರ ಪ್ರತಿಮೆಗೆ ಪಿಎಲ್ಡಿ ಬ್ಯಾಂಕಿನ ಅಧ್ಯಕ್ಷ ಭಾಸ್ಕರ್ ಎಸ್. ಗೌಡ ಇಚ್ಲಂಪಾಡಿರವರು ಹಾರಾರ್ಪಣೆಗೈದು, ಗೌರವವನ್ನು ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಬ್ಯಾಂಕಿನ ಆಡಳಿತ ಮಂಡಳಿಯವರು ಉಪಸ್ಥಿತರಿದ್ದರು.
ಬ್ಯಾಂಕಿನ ಅಧ್ಯಕ್ಷ ಭಾಸ್ಕರ್ ಎಸ್ ಗೌಡ ಇಚ್ಲಂಪಾಡಿ ಸ್ವಾಗತಿಸಿ, ಕೋಶಾಧಿಕಾರಿ ನಾರಾಯಣ ಪೂಜಾರಿ ಕುರಿಕ್ಕಾರ ವಂದಿಸಿದರು, ಬ್ಯಾಂಕಿನ ವ್ಯವಸ್ಥಾಪಕ ಶೇಖರ ಎಂ. ವರದಿ ವಾಚಿಸಿದರು. ಕಾರ್ಯಕ್ರಮ ನಿರೂಪಿಸಿದರು. ಕಡಬ ಶಾಖೆಯ ವ್ಯವಸ್ಥಾಪಕಿ ಸುಮನ ಎಂ. ಲೆಕ್ಕಾಧಿಕಾರಿ ವಿನಯಕುಮಾರ್ ಕ್ಷೇತ್ರಾಧಿಕಾರಿ ರೊನಾಲ್ಡ್ ಮಾರ್ಟಿಸ್, ಸಿಬ್ಬಂದಿಗಳಾದ ಆರತಿ ಟಿ.ಕೆ, ಸುರೇಶ್ ಪಿ, ಎನ್.ವೇಣು ಭಟ್, ಭರತ್ ಟಿ, ಹರೀಶ್ ಗೌಡ, ವಿಜಯ ಭಟ್ ಎಚ್, ವಿನಯಕುಮಾರ್ ಗೌಡ ಬಿ.ಎಸ್, ಶಿವಪ್ರಸಾದ್ ಯು, ಮನೋಜ್ ಕುಮಾರ್ ಕೆ ಹಾಗೂ ಮನೋಜ್ ಎರವರುಗಳು ಸಹಕರಿಸಿದರು
ಪಿಎಲ್ಡಿ ಬ್ಯಾಂಕ್ನಲ್ಲಿ ಚಿನ್ನಾಭರಣ ಸಾಲದ ಬಡ್ಡಿ ಭಾರಿ ಇಳಿಕೆ
ಪುತ್ತೂರು ಪಿಎಲ್ಡಿ ಬ್ಯಾಂಕ್ನಲ್ಲಿ ಚಿನ್ನಾಭರಣದ ಮೇಲಿನ ಸಾಲದ ಬಡ್ಡಿಯನ್ನು ಬ್ಯಾಂಕ್ನ ನೂತನ ಕಟ್ಟಡ 2 ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಸಂದರ್ಭದಲ್ಲಿ ಭಾರೀ ಇಳಿಕೆಯನ್ನು ಮಾಡಲಾಗಿದೆ. ಈ ಹಿಂದೆ 12.50 ಶೇ ಬಡ್ಡಿ ಇದ್ದ ಚಿನ್ನಾಭರಣ ಸಾಲಕ್ಕೆ ಇದೀಗ ಶೇಕಡಾ 10 ರ ಬಡ್ಡಿಯಲ್ಲಿ ಸಾಲವನ್ನು ನೀಡಲಾಗುವುದು. ಅಲ್ಲದೇ ಪ್ರತಿ ಗ್ರಾಂ ಚಿನ್ನಕ್ಕೆ ಗರಿಷ್ಟ ಮೊತ್ತ 4300 ರಂತೆ ಸಾಲವನ್ನು ನೀಡಲಾಗುವುದು. ಇದು ಇದು ಬ್ಯಾಂಕಿನ ಸದಸ್ಯರು ಸೇರಿದಂತೆ, ಎಲ್ಲಾ ಸಾರ್ವಜನಿಕರಿಗೂ ಈ ಸೌಲಭ್ಯ ದೊರೆಯಲಿದೆ. ಅಲ್ಲದೇ ಬ್ಯಾಂಕಿನಲ್ಲಿ ಆರ್ಡಿ ಖಾತೆಯನ್ನು ತೆರೆಯಲಾಗಿದ್ದು, ಗ್ರಾಹಕರು ಪ್ರತಿ ತಿಂಗಳು ಆರ್ಡಿ ಖಾತೆಯಲ್ಲಿ ಹಣ ಉಳಿತಾಯ ಮಾಡಿ, ಹೆಚ್ಚು ಬಡ್ಡಿಯನ್ನು ಪಡೆಯಬಹುದು.