ಉದನೆ ಸೈಂಟ್ ಆಂಟನೀಸ್ ವಿದ್ಯಾಸಂಸ್ಥೆಯಲ್ಲಿ ಪುತ್ತೂರು ತಾ| ಮಟ್ಟದ ಪ್ರೌಢ ಶಾಲಾ ಬಾಲಕ/ಬಾಲಕಿಯರ ತ್ರೋಬಾಲ್ ಪಂದ್ಯಾಟ

0

ಕ್ರೀಡೆಯಿಂದ ಸ್ವಾವಲಂಬಿ ಬದುಕು ಸಾಧ್ಯ- ಶಾಸಕಿ ಭಾಗೀರಥಿ ಮುರುಳ್ಯ
ಸ್ಪರ್ಧೆ ಜಯವನ್ನು ಗುರುತಿಸಲು ಮಾತ್ರ-ರೆ.ಫಾ ಹನಿ ಜೇಕಬ್

ನೆಲ್ಯಾಡಿ: ಉದನೆ ಸೈಂಟ್ ಆಂಟನೀಸ್ ವಿದ್ಯಾಸಂಸ್ಥೆಯಲ್ಲಿ ಪುತ್ತೂರು ತಾಲೂಕು ಮಟ್ಟದ ಪ್ರೌಢ ಶಾಲಾ ಬಾಲಕ ಹಾಗೂ ಬಾಲಕಿಯರ ತ್ರೋಬಾಲ್ ಪಂದ್ಯಾಟ ನಡೆಯಿತು.
ಸುಳ್ಳ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಭಾಗೀರಥಿ ಮುರುಳ್ಯ ಅವರು ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಕ್ರೀಡಾಮನೋಭಾವ ಬೆಳೆಸುವುದರಿಂದ ಸ್ವಾವಲಂಬಿ ಜೀವನ ನಡೆಸುವ ಶಕ್ತಿ ಮತ್ತು ಧೈರ್ಯ ಬರುವುದು. ಪ್ರತಿಯೊಬ್ಬರು ಕ್ರೀಡಾ ಸ್ಪೂರ್ತಿ ಬೆಳೆಸಿಕೊಳ್ಳಬೇಕು ಎಂದು ಹೇಳಿದರು. ಸಂಸ್ಥೆಯ ಸಂಚಾಲಕರಾದ ರೆ.ಫಾ.ಹನಿ ಜೇಕಬ್‌ರವರು ಮಾತನಾಡಿ, ಸ್ಪರ್ಧೆಯನ್ನು ವ್ಯಕ್ತಿಗತವಾಗಿ ನೋಡಬಾರದು. ಸ್ಪರ್ಧೆ ಎಲ್ಲಾ ಕಡೆ ಇರುತ್ತದೆ. ಆಗ ಮಾತ್ರ ನಾವು ವಿಜಯವನ್ನು ಗುರುತಿಸಲು ಸಾಧ್ಯ ಎಂದು ಹೇಳಿ ಶುಭ ಹಾರೈಸಿದರು. ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಕಾರ್ಯಾಧ್ಯಕ ಹಾಗೂ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಸದಸ್ಯರಾದ ಮಾಮಚ್ಚನ್ ಕ್ರೀಡಾಪಟುಗಳಿಗೆ ಶುಭ ಹಾರೈಸಿದರು.


ಸಭಾಧ್ಯಕ್ಷತೆ ವಹಿಸಿದ ಶಿರಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕಾರ್ತಿಕೇಯನ್ ಎಲ್ಲಾ ಆಟಗಾರರಿಗೆ ಶುಭ ಹಾರೈಸಿದರು. ವೇದಿಕೆಯಲ್ಲಿ ಶಿರಾಡಿ ಗ್ರಾಮ ಪಂಚಾಯತ್ ಸದಸ್ಯರಾದ ಲಕ್ಷ್ಮಣ ಗೌಡ ಕುದ್ಕೋಳಿ, ರಾಧ ತಂಗಪ್ಪನ್, ಪೂರ್ವ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಜಿಮ್ಸನ್, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಜಯಪ್ರಕಾಶ್ ಎಂ, ಮೇಹಿ ಜಾರ್ಜ್, ಆಡಳಿತ ಅಧಿಕಾರಿ ಕೆ.ಕೆ.ಜಾನ್, ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ಜಿಮ್ಸನ್ ವರ್ಗೀಸ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ತಾ.ಪಂ.ಮಾಜಿ ಸದಸ್ಯ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಭಾಸ್ಕರ ಗೌಡ ಇಚ್ಲಂಪಾಡಿ, ಜಿ.ಪಂ.ಮಾಜಿ ಸದಸ್ಯ ಬಾಲಕೃಷ್ಣ ಬಾಣಜಾಲು, ಹಿರಿಯ ವಕೀಲ ಶಿವಪ್ರಸಾದ್ ಪುತ್ತಿಲ, ಸಂಸ್ಥೆಯ ಶಿಕ್ಷಕ ಶಿಕ್ಷಕೇತರ ವೃಂದ, ವಿವಿಧ ಶಾಲೆಗಳಿಂದ ಆಗಮಿಸಿದ ಕ್ರೀಡಾಪಟುಗಳು, ದೈಹಿಕ ಶಿಕ್ಷಣ ಶಿಕ್ಷಕರು, ಶಿಕ್ಷಕ ರಕ್ಷಕ ಸಂಘದ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಸೈಂಟ್ ಆಂಟನೀಸ್ ಪ್ರೌಢ ಶಾಲೆಯ ಮುಖ್ಯಗುರು ಶ್ರೀಧರ ಗೌಡ ಸ್ವಾಗತಿಸಿ, ದೈಹಿಕ ಶಿಕ್ಷಣ ಶಿಕ್ಷಕ ರಾಜೇಶ್ ರೈ ವಂದಿಸಿದರು. ಶಿಕ್ಷಕ ಯಶೋಧರ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here