ಪುತ್ತೂರು: ರಾಷ್ಟ್ರೀಯವಾದಿ ಚಿಂತಕ, ಭಾರತೀಯ ಜನಸಂಘದ ಸಂಸ್ಥಾಪಕರಾದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯರವರ 107ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಸೆ.25ರಂದು ಪುತ್ತೂರು ಬಿಜೆಪಿ ಕಚೇರಿಯಲ್ಲಿ ಆಚರಿಸಲಾಯಿತು. ಬೆಳಿಗ್ಗೆ ಕಚೇರಿಯಲ್ಲಿ ಗಣಪತಿ ಹೋಮ ನಡೆಯಿತು. ಬಳಿಕ ರೋಟರಿ ಬ್ಲಡ್ ಬ್ಯಾಂಕ್ ಮೂಲಕ ರಕ್ತದಾನ ಶಿಬಿರ ನಡೆಯುತ್ತಿದೆ.
ಮಾಜಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ನಗರ ಮಂಡಲದ ಅಧ್ಯಕ್ಷ ಪಿ.ಜಿಜಗನ್ನಿವಾಸ ರಾವ್, ಪ್ರಧಾನ ಕಾರ್ಯದರ್ಶಿಗಳಾದ ಪುರುಷೋತ್ತಮ ಮುಂಗ್ಲಿಮನೆ, ನಿತೀಶ್ ಕುಮಾರ್ ಶಾಂತಿನವ, ಯುವರಾಜ್ ಪೆರಿಯತ್ತೋಡಿ, ಜಯಶ್ರೀ ಎಸ್ ಶೆಟ್ಟಿ, ಉಪಾಧ್ಯಕ್ಷ ಹರಿಪ್ರಸಾದ್ ಯಾದವ್, ಮಾಜಿ ಪುರಸಭೆ ಅಧ್ಯಕ್ಷ ಯು.ಲೋಕೇಶ್ ಹೆಗ್ಡೆ, ಸುರೇಶ್ ಆಳ್ವ, ಶಂಭು ಭಟ್ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು. ಅರ್ಚಕ ಉದಯ ಭಟ್ ಗಣಪತಿ ಹೋಮ ನೆರವೇರಿಸಿದರು.