ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಕಡಬ ತಾಲೂಕು ಇದರ ನೆಲ್ಯಾಡಿ ವಲಯದ ಕಟ್ಟೆಮಜಲು ಒಕ್ಕೂಟದ ವತಿಯಿಂದ ಪಾಪಿನಮಂಡೆ ಮಾರ್ಸೆಲ್ ಡಿ ಸೋಜಾರವರ ತೋಟದಲ್ಲಿ ಮಣ್ಣು ಪರೀಕ್ಷೆ ಮತ್ತು ಹಸಿರೆಲೆ ಗೊಬ್ಬರದ ಬಗ್ಗೆ ಮಾಹಿತಿ ಕಾರ್ಯಕ್ರಮ ನಡೆಯಿತು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಆಲಂಕಾರು ಮಣ್ಣು ಪರೀಕ್ಷಾ ಕೇಂದ್ರದ ರವಿಕಿರಣ್ರವರು ಮಣ್ಣು ಪರೀಕ್ಷೆ, ಹಸಿರೆಲೆಯ ಬಗ್ಗೆ ಮಾಹಿತಿ ನೀಡಿದರು. ತಾಲೂಕು ಕೃಷಿ ಮೇಲ್ವಿಚಾರಕ ಸೋಮೇಶ್ರವರು ಪ್ರಾಸ್ತಾವಿಕವಾಗಿ ಮಾತನಾಡಿದರು. ನೆಲ್ಯಾಡಿ ವಲಯ ಮೇಲ್ವಿಚಾರಕ ವಿಜೇಶ್ ಜೈನ್, ಕಟ್ಟೆಮಜಲು ಒಕ್ಕೂಟದ ಅಧ್ಯಕ್ಷ ಮಾರ್ಸೆಲ್ ಡಿ ಸೋಜಾ, ಕೌಕ್ರಾಡಿ ಒಕ್ಕೂಟದ ಅಧ್ಯಕ್ಷ ಬಾಲಕೃಷ್ಣ ಗೌಡ, ನೆಲ್ಯಾಡಿ ಒಕ್ಕೂಟದ ಉಪಾಧ್ಯಕ್ಷ ಭಾಸ್ಕರ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸೇವಾ ಪ್ರತಿನಿಧಿಗಳಾದ ಸುಮನಾ, ಹೇಮಾವತಿ ಎ., ನಮಿತಾ ಶೆಟ್ಟಿ, ಒಕ್ಕೂಟದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು. ಸೇವಾಪ್ರತಿನಿಧಿ ಹೇಮಾವತಿ ಜೆ., ಸ್ವಾಗತಿಸಿ ಸುಮನ ಎಸ್. ವಂದಿಸಿದರು.