ನೆಲ್ಯಾಡಿ: ಲಯನ್ಸ್ ಕ್ಲಬ್ ಆಲಂಕಾರು ದುರ್ಗಾಂಬಾ, ಯುವಶಕ್ತಿ ಗೆಳೆಯರ ಬಳಗ ಮುರಿಯೇಲು, ಆದರ್ಶ ಯುವಕ ಮಂಡಲ ಶಾಂತಿನಗರ ಇದರ ಸಹಕಾರದೊಂದಿಗೆ ಪ್ರಾಥಮಿಕ ಆರೋಗ್ಯ ಕೇಂದ್ರ ನೆಲ್ಯಾಡಿ ಮತ್ತು ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ ಯೆನಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾನಿಲಯ ದೇರಳಕಟ್ಟೆ ಇದರ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಸೆ.೨೪ರಂದು ಶಾಂತಿನಗರ ಸರಕಾರಿ ಹಿ.ಪ್ರಾ.ಶಾಲೆಯಲ್ಲಿ ನಡೆಯಿತು.
ಶಾಂತಿನಗರ ಶಾಲಾ ರಜತ ಮಹೋತ್ಸವ ಸಮಿತಿ ಅಧ್ಯಕ್ಷ ರವೀಂದ್ರ ಭಟ್ ಕೆ.,ಉದ್ಘಾಟಿಸಿದರು. ಲಯನ್ಸ್ ಕ್ಲಬ್ ಆಲಂಕಾರು ದುರ್ಗಾಂಬಾ ಇದರ ಅಧ್ಯಕ್ಷ ಪ್ರಶಾಂತ್ ರೈ ಮನವಳಿಕೆ ಅಧ್ಯಕ್ಷತೆ ವಹಿಸಿದ್ದರು. ಗೋಳಿತ್ತೊಟ್ಟು ಗ್ರಾ.ಪಂ.ಅಧ್ಯಕ್ಷೆ ಸವಿತಾ, ಶಾಂತಿನಗರ ಹಾ.ಉ.ಸಹಕಾರಿ ಸಂಘದ ಅಧ್ಯಕ್ಷ ಪ್ರತಾಪ್ಚಂದ್ರ ರೈ ಕುದ್ಮಾರುಗುತ್ತು, ಶಾಂತಿನಗರ ಸರಕಾರಿ ಹಿ.ಪ್ರಾ.ಶಾಲಾ ಮುಖ್ಯಗುರು ಪ್ರದೀಪ್ ಬಾಕಿಲ, ನೆಲ್ಯಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸುರಕ್ಷಾ ಅಧಿಕಾರಿ ಲೀನಾ ಕೆ., ಶಾಂತಿನಗರ ಆದರ್ಶ ಯುವಕ ಮಂಡಲದ ಅಧ್ಯಕ್ಷ ತೇಜಸ್ ಶಾಂತಿನಗರ, ಶಾಂತಿನಗರ ಮುರಿಯೇಲು ಯುವಶಕ್ತಿ ಗೆಳೆಯರ ಬಳಗದ ಅಧ್ಯಕ್ಷ ಪವನ್ಕುಮಾರ್ ರೈ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಮಧ್ಯಾಹ್ನದ ತನಕ ನಡೆದ ಶಿಬಿರದಲ್ಲಿ ಸಾಮಾನ್ಯ ತಪಾಸಣೆ, ನೇತ್ರ ವಿಭಾಗ, ಕಿವಿ, ಮೂಗು ಮತ್ತು ಗಂಟಲು ವಿಭಾಗ, ಚರ್ಮದ ವಿಭಾಗದ ವೈದ್ಯರು ಆರೋಗ್ಯ ತಪಾಸಣೆ ನಡೆಸಿದರು.