ಈಜು ಸ್ಪರ್ಧೆ-ತೆಂಕಿಲ ವಿವೇಕಾನಂದ ಆ.ಮಾ ಶಾಲೆಯ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ

0

ಪುತ್ತೂರು: ವಿದ್ಯಾಭಾರತಿ ಕರ್ನಾಟಕ  ಇದರ ಆಶ್ರಯದಲ್ಲಿ ಜಿಲ್ಲಾಮಟ್ಟದ ಈಜು ಸ್ಪರ್ಧೆಯು ಸೆ.26ರಂದು ಶಿವರಾಮ ಕಾರಂತ ಈಜುಕೊಳ ಇಲ್ಲಿ ನಡೆದಿದ್ದು, ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲ, ಪುತ್ತೂರು ಇಲ್ಲಿನ ವಿದ್ಯಾರ್ಥಿಗಳು ಹಲವು ಪ್ರಶಸ್ತಿಗಳನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

 ಬಾಲ ವರ್ಗದ ಬಾಲಕರ ವಿಭಾಗದಲ್ಲಿ 7ನೇ ತರಗತಿಯ ನಮನ್ ನಾಯ್ಕ್ ಬಿ 100 ಮೀಟರ್ ಬ್ರೆಸ್ಟ್ ಸ್ಟ್ರೋಕ್ ನಲ್ಲಿ ಕಂಚಿನ ಪದಕ, 100 ಮೀಟರ್ ಫ್ರೀ ಸ್ಟೈಲ್ ನಲ್ಲಿ ಬೆಳ್ಳಿ ಪದಕ ಹಾಗೂ 50 ಮೀಟರ್ ಬಟರ್ ಫ್ಲೈ ನಲ್ಲಿ ಚಿನ್ನದ ಪದಕ ಪಡೆದಿರುತ್ತಾರೆ. ಇವರು ಸಂದೀಪ್ ನಾಯ್ಕ್ ಬಿ ಹಾಗೂ ನಮಿತಾ ನಾಯ್ಕ್ ಬಿ ದಂಪತಿಯವರ ಪುತ್ರ.

ಕಿಶೋರ ರ್ವರ್ಗದ ಬಾಲಕರ ವಿಭಾಗದಲ್ಲಿ ಹತ್ತನೇ ತರಗತಿಯ ವೇದವೃತ್ ಬಂಡಾರಿ ಸಿ 100 ಮೀಟರ್ ಬ್ರೆಸ್ಟ್ ಸ್ಟ್ರೋಕ್ ನಲ್ಲಿ  ಬೆಳ್ಳಿ ಪದಕ, 100 ಮೀಟರ್ ಫ್ರೀ ಸ್ಟೈಲ್ ನಲ್ಲಿ ಬೆಳ್ಳಿ ಪದಕ ಪಡೆದಿರುತ್ತಾರೆ. ಇವರು ಸಂತೋಷ್ ಭಂಡಾರಿ ಮತ್ತು ಮೀನಾಕ್ಷಿ ಭಂಡಾರಿಯವರ ಪುತ್ರ.

 ಕಿಶೋರ ವರ್ಗದ ಬಾಲಕಿಯರ ವಿಭಾಗದಲ್ಲಿ 10ನೇ ತರಗತಿಯ ಪ್ರತೀಕ್ಷಾ ಆಳ್ವ 100 ಮೀಟರ್ ಫ್ರೀ ಸ್ಟೈಲ್ ನಲ್ಲಿ ಚಿನ್ನದ ಪದಕ, 200 ಮೀಟರ್ ಫ್ರೀ ಸ್ಟೈಲ್ ನಲ್ಲಿ ಚಿನ್ನದ ಪದಕ ಹಾಗೂ 50 ಮೀಟರ್ ಫ್ರೀ ಸ್ಟೈಲ್ ನಲ್ಲಿ ಚಿನ್ನದ ಪದಕ ಪಡೆದಿರುತ್ತಾರೆ. ಇವರು ಚಂದ್ರಶೇಖರ್ ಆಳ್ವ ಹಾಗೂ ಉಷಾ ಆಳ್ವ ದಂಪತಿಯವರ ಪುತ್ರಿ.

ಇಂದು(ಸೆ.28) ಬೆಂಗಳೂರಿನ ತನಿಸಂದ್ರ ದಲ್ಲಿ ನಡೆಯುವ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ ಎಂದು ಮುಖ್ಯ ಶಿಕ್ಷಕಸತೀಶ್ ಕುಮಾರ್ ರೈ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here