ವಿಟ್ಲ : ವ್ಯಕ್ತಿಯೋರ್ವರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾಣಿ – ಮೈಸೂರು ರಾಜ್ಯ ಹೆದ್ದಾರಿಯ ನೇರಳಕಟ್ಟೆ ಸಮೀಪದ ಪರ್ಲೊಟ್ಟು ಎಂಬಲ್ಲಿ ಅ.2ರಂದು ನಡೆದಿದೆ.
ಸೂರಿಕುಮೇರ್ ನಿವಾಸಿ ಅಮೂಲ್ಯ ಆರ್ಟ್ ಗ್ಯಾಲರಿ ಮಾಲಕ, ಎಲ್ಲೈಸಿ ಏಜೆಂಟ್ ನಾರಾಯಣ ಕುಲಾಲ್ ಆತ್ಮಹತ್ಯೆ ಮಾಡಿಕೊಂಡವರಾಗಿದ್ದಾರೆ.
ಅ.2ರಂದು ಮುಂಜಾನೆ 5 ಗಂಟೆಯ ವೇಳೆಗೆ ಪರ್ಲೊಟ್ಟು ಎಂಬಲ್ಲಿನ ಕೆರೆಯ ಬಳಿ ಬೈಕ್, ಮೊಬೈಲ್, ಚಪ್ಪಲಿಯನ್ನು ನೋಡಿದ ಸ್ಥಳೀಯರು ಯಾರೋ ಕೆರೆಗೆ ಹಾರಿ ಆತ್ಮಹತ್ಯೆ ಗೈದಿರಬೇಕು ಎಂಬ ಸಂಶಯದಿಂದ ವಿಟ್ಲ ಠಾಣಾ ಪೊಲೀಸರಿಗೆ ಹಾಗೂ ಅಗ್ನಿಶಾಮಕ ದಳದವರಿಗೆ ಮಾಹಿತಿ ನೀಡಿದ್ದಾರೆ.
ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಸ್ಥಳೀಯರ ಸಹಕಾರದಲ್ಲಿ ಕೆರೆಯಲ್ಲಿ ಹುಡುಕಾಟ ನಡೆಸಿದ ವೇಳೆ ನಾರಾಯಣ ಕುಲಾಲ್ ರವರ ಮೃತದೇಹ ಪತ್ತೆಯಾಗಿದೆ. ಮೃತದೇಹವನ್ನು ಅಧಿಕಾರಿಗಳು ಮೇಲಕ್ಕೆತ್ತಿದ ವೇಳೆ ಸ್ಥಳೀಯರು ಗುರುತು ಪತ್ತೆ ಹಚ್ಚಿದ್ದಾರೆ. ವಿಟ್ಲ ಠಾಣಾ ಪೊಲೀಸರು ಸ್ಥಳಕ್ಕೆ ಬೇಟಿ ನೀಡಿದ್ದು ಮಾಹಿತಿ ಸಂಗ್ರಹಿಸಿದ್ದಾರೆ.