ಕೊಯಿಲ: ಕಡಬ ತಾಲೂಕು ಪಂಚಾಯತ್, ಕೊಯಿಲ ಗ್ರಾ.ಪಂ, ಸ್ನೇಹ ಸಂಜೀವಿನಿ ಒಕ್ಕೂಟಗಳ ಆಶ್ರಯದಲ್ಲಿ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮದಡಿ ಅ.1ರಂದು ಕೊಯಿಲ ಗ್ರಾ.ಪಂ.ವ್ಯಾಪ್ತಿಯಲ್ಲಿ ಸ್ವಚ್ಛತಾ ಶ್ರಮದಾನ ನಡೆಸಲಾಯಿತು.
ಗ್ರಾ.ಪಂ ವ್ಯಾಪ್ತಿಯ ಗೋಕುಲನಗರದಲ್ಲಿ ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ ಬದಿ, ಸಾರ್ವಜನಿಕ ರಿಕ್ಷಾ ನಿಲ್ದಾಣ, ಬಸ್ಸು ತಂಗುದಾಣ, ಶುದ್ಧ ಕುಡಿಯುವ ನೀರಿನ ಘಟಕ, ಗ್ರಾ.ಪಂ ಕಛೇರಿ ಆವರಣ ಹಾಗೂ ಸಾರ್ವಜನಿಕ ಕುಡಿಯುವ ನೀರಿನ ಟ್ಯಾಂಕ್ಗಳನ್ನು ಸ್ವಚ್ಛಗೊಳಿಸಲಾಯಿತು. ಕಡಬ ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿ ಭವಾನಿ ಶಂಕರ ಎನ್. ಅವರು ಅಂಗಡಿಗಳ ಮಾಲೀಕರಿಗೆ ಬಟ್ಟೆಯ ಕೈ ಚೀಲಗಳನ್ನು ವಿತರಿಸಿದರು. ಸ್ವಚ್ಛತಾ ಪ್ರತಿಜ್ಞೆಯನ್ನು ಕೈಗೊಳ್ಳಲಾಯಿತು.
ಕಡಬ ತಾ.ಪಂ. ಸಹಾಯಕ ನಿರ್ದೇಶಕ ಚೆನ್ನಪ್ಪ ಗೌಡ, ಕೊಯಿಲ ಗ್ರಾ.ಪಂ.ಅಧ್ಯಕ್ಷೆ ಪುಷ್ಪಾ ಸುಭಾಶ್ ಶೆಟ್ಟಿ, ಉಪಾಧ್ಯಕ್ಷ ಯತೀಶ್, ಸದಸ್ಯರು, ಪಿಡಿಓ, ಕಾರ್ಯದರ್ಶಿ, ಗ್ರಾ.ಪಂ ಸಿಬ್ಬಂದಿಗಳು, ಸಂಜೀವಿನಿ ಒಕ್ಕೂಟದ ಸದಸ್ಯರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ರಿಕ್ಷಾ ಚಾಲಕ ಮಾಲಕ ಸಂಘದ ಪದಾಧಿಕಾರಿಗಳು, ಲಯನ್ಸ್ ಕ್ಲಬ್ ಮತ್ತು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪದಾಧಿಕಾರಿಗಳು, ಗ್ರಾಮ ಪುನರ್ವಸತಿ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಭಾಗವಹಿಸಿದರು.