





ಪುತ್ತೂರು: ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದ ಟ್ರಿಪಲ್ ಜಂಪ್ ಸ್ಪರ್ಧೆಯಲ್ಲಿ ಪುತ್ತೂರು ತಾಲೂಕನ್ನು ಪ್ರತಿನಿಧಿಸಿದ ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ನಿಹಾಲ್ ರಾಜ್ ಬೆಳ್ಳಿಯ ಪದಕವನ್ನು ಗಳಿಸಿದ್ದಾರೆ.


ಈತನು ಕಬಕದ ಬಿ ನಾಗರಾಜ್ ಹೆಗ್ಡೆ ಮತ್ತು ಭಾನುಮತಿ ರವರ ಪುತ್ರ. ಈತನ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.











