ಪುತ್ತೂರು: ಒಳಮೊಗ್ರು ಗ್ರಾಮದ ಬಾಂದಲಪ್ಪು ಜನಸೇವಾ ಸಮಿತಿ ಕುಂಬ್ರ ಇದರ ಆಶ್ರಯದಲ್ಲಿ ಎ.ಜೆ ಮೆಡಿಕಲ್ ಕಾಲೇಜು ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರ ಕುಂಟಿಕಾನ ಮಂಗಳೂರು ಇವರ ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಅ.8 ರಂದು ಬೆಳಿಗ್ಗೆಯಿಂದ ಮಧ್ಯಾಹ್ನದ ತನಕ ಕುಂಬ್ರ ಕರ್ನಾಟಕ ಪಬ್ಲಿಕ್ ಸ್ಕೂಲ್ ಸಭಾಂಗಣದಲ್ಲಿ ನಡೆಯಲಿದೆ. ಇದರ ಕರಪತ್ರ ಮತ್ತು ಬ್ಯಾನರ್ ಅನ್ನು ನಿವೃತ್ತ ಪ್ರಾಂಶುಪಾಲ ಜತ್ತಪ್ಪ ರೈ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಕುಕ್ಕುಮಗೇರುನ ಮೊಕ್ತೇಸರ ಎ.ಜಿ ವಿಜಯ ಕುಮಾರ್ ರೈ,ಬಾಂದಲಪ್ಪು ಜನಸೇವಾ ಸಮಿತಿಯ ಗೌರವ ಅಧ್ಯಕ್ಷ ಕುಂಬ್ರ ದುರ್ಗಾಪ್ರಸಾದ್ ರೈ, ಅಧ್ಯಕ್ಷ ಎ.ರಕ್ಷಿತ್ ರೈ ಮುಗೇರು, ಪ್ರ.ಕಾರ್ಯದರ್ಶಿ ಅಶೋಕ ಪೂಜಾರಿ ಬೊಳ್ಳಾಡಿ, ಉಪಾಧ್ಯಕ್ಷ ವಿನೋದ್ ಶೆಟ್ಟಿ ಮುಡಾಲ, ಸಂಘಟನಾ ಕಾರ್ಯದರ್ಶಿ ಮಹಮ್ಮದ್ ಬೊಳ್ಳಾಡಿ, ಶೀನಪ್ಪ ನಾಯ್ಕ ಮುಡಾಲ, ಕಾರ್ಯಕಾರಿ ಸಮಿತಿ ಸದಸ್ಯ ಶೇಖರ ರೈ ಕುರಿಕ್ಕಾರ ಉಪಸ್ಥಿತರಿದ್ದರು.
ಆರೋಗ್ಯ ಶಿಬಿರವನ್ನು ಶಾಸಕ ಅಶೋಕ್ ರೈ ಉದ್ಘಾಟಿಸಲಿದ್ದು, ಮಾಜಿ ಶಾಸಕ ಸಂಜೀವ ಮಠಂದೂರು ಸಭಾಧ್ಯಕ್ಷತೆ ವಹಿಸಲಿದ್ದಾರೆ. ಅರುಣ್ ಕುಮಾರ್ ಪುತ್ತಿಲ ಸಹಿತ ಹಲವು ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಬಾಂದಲಪ್ಪು ಜನಸೇವಾ ಸಮಿತಿ ಪ್ರಕಟಣೆ ತಿಳಿಸಿದೆ.
ಉಚಿತ ಆರೋಗ್ಯ ತಪಾಸಣೆ
ಶಿಬಿರದಲ್ಲಿ ಸಾಮಾನ್ಯ ಆರೋಗ್ಯ ತಪಾಸಣೆ, ಕಿವಿ,ಮೂಗು,ಗಂಟಲು ತಪಾಸಣೆ, ಚರ್ಮರೋಗ, ಕಣ್ಣಿನ ತಪಾಸಣೆ, ಕಣ್ಣಿನ ಪೊರೆಯ ಶಸ್ತ್ರ ಚಿಕಿತ್ಸೆಯನ್ನು ಉಚಿತವಾಗಿ ಮಾಡಿಕೊಡಲಾಗುವುದು ಅಲ್ಲದೆ ಮಧುಮೇಹ, ರಕ್ತದ ಒತ್ತಡ, ಹೃದಯ ಸಂಬಂಧಿ ರೋಗ ತಪಾಸಣೆ (ಇಸಿಜಿ) ಇತ್ಯಾದಿ ತಪಾಸಣೆಗಳನ್ನು ನುರಿತ ವೈದ್ಯರು ನಡೆಸಿಕೊಡಲಿದ್ದಾರೆ.