ಪುತ್ತೂರು: ನೆಲ್ಲಿಕಟ್ಟೆ ಡಾ.ಕೆ ಶಿವರಾಮ ಕಾರಂತ ಸರ್ಕಾರಿ ಪ್ರೌಢಶಾಲೆಯಲ್ಲಿ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನಾಚರಣೆಯನ್ನು ಆಚರಿಸಲಾಯಿತು.
ಎಸ್ಡಿಎಂಸಿ ಕಾರ್ಯಾಧ್ಯಕ್ಷ ದಿನೇಶ್ ಕಾಮತ್ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಆದರ್ಶಗಳನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕೆಂದು ಹೇಳಿದರು.
ಕಾರ್ಯಕ್ರಮದಲ್ಲಿ ಸರ್ವಧರ್ಮ ಪ್ರಾರ್ಥನಾ ಗೀತೆಯನ್ನು ಹಾಡಲಾಯಿತು. ಕಲಾ ಶಿಕ್ಷಕಿ ನಳಿನಿ ಎ. ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಕುರಿತಾಗಿ ಮಾತನಾಡಿದರು. ವಿಜ್ಞಾನ ಶಿಕ್ಷಕಿ ವೀಣಾ ಎ ವಿ ಯವರು ರೇಬಿಸ್ ರೋಗ ಹರಡುವ ರೀತಿ ಮತ್ತು ಅದನ್ನು ತಡೆಗಟ್ಟಲು ವಹಿಸಬೇಕಾದ ಮುನ್ನೆಚ್ಚರಿಕೆಯ ಬಗ್ಗೆ ಮಾಹಿತಿ ನೀಡಿದರು. ಶಾಲಾ ಮುಖ್ಯಗುರು ಜಲಜಾಕ್ಷಿ ಕೆ ಎಂ ಸ್ವಾಗತಿಸಿದರು. ಹಿಂದಿ ಶಿಕ್ಷಕ ಅಬ್ರಹಾಂ ಎಸ್ ಎ ವಂದಿಸಿದರು. ಕನ್ನಡ ಶಿಕ್ಷಕ ನಾರಾಯಣ ನಾಯ್ಕ್ ಎ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕರಾದ ಅನ್ನಮ ಪಿ ಎಸ್, ಡಾ. ಚಾಂದಿನಿ, ಪ್ರಮೀಳಾ ಬಿ ಕೆ, ಕಚೇರಿ ಸಿಬ್ಬಂದಿ ಮಲ್ಲರಾಜುರವರು ಸಹಕರಿಸಿದರು.