ಇಚ್ಲಂಪಾಡಿ ನೇರ್ಲ ಶಾಲೆಯಲ್ಲಿ ಗಾಂಧಿ, ಲಾಲ್‌ಬಹದ್ದೂರು ಶಾಸ್ತ್ರಿ ಜನ್ಮದಿನಾಚರಣೆ

0

ನೆಲ್ಯಾಡಿ: ಇಚ್ಲಂಪಾಡಿ ನೇರ್ಲ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಹಾತ್ಮ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯನ್ನು ಅ.2ರಂದು ಆಚರಿಸಲಾಯಿತು.


ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಭಾವಚಿತ್ರಗಳಿಗೆ ಪುಷ್ಪ ನಮನ ಸಲ್ಲಿಸಲಾಯಿತು. ಮಕ್ಕಳು ಗಾಂಧೀಜಿಯವರ ಬಗ್ಗೆ ಭಾಷಣ ಮಾಡಿದರು. ಗಾಂಧೀಜಿಯವರಿಗೆ ಪ್ರಿಯವಾದ ಭಜನೆಗಳನ್ನು ಹಾಡಲಾಯಿತು. ಕಾರ್ಯಕ್ರಮದಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ವಸಂತ ಬಿಜೇರು, ಶಿಕ್ಷಕರಾದ ಗಿರೀಶ್ ಮಾತನಾಡಿ ಮಹಾತ್ಮ ಗಾಂಧೀಜಿಯವರ ತತ್ವಗಳಾದ ಅಹಿಂಸೆ, ಸತ್ಯ, ಪ್ರಾಮಾಣಿಕತೆ, ಸರಳತೆಯನ್ನು ಮಕ್ಕಳಿಗೆ ತಿಳಿಸಿ ಜೀವನದಲ್ಲಿ ಅಳವಡಿಸುವಂತೆ ಹೇಳಿದರು. ಲಾಲ್ ಬಹದ್ದೂರ್ ಶಾಸ್ತ್ರಿಜಿಯವರ ಪ್ರಾಮಾಣಿಕತೆ, ಸರಳತೆ ಮತ್ತು ಸಾಧನೆಯನ್ನು ಮಕ್ಕಳಿಗೆ ಪರಿಚಯಿಸಿದರು. ಜೊತೆಗೆ ರಾಷ್ಟ್ರೀಯ ಸ್ವಚ್ಛತಾ ದಿವಸದ ಮಹತ್ವವನ್ನು ತಿಳಿಸಿದರು.
ಮುಖ್ಯೋಪಾಧ್ಯಾಯನಿ ಜಯಶ್ರೀ ಎಸ್. ಸ್ವಾಗತಿಸಿದರು. ಹಿರಿಯ ಶಿಕ್ಷಕಿ ಜಯ ವಂದಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕವೃಂದ, ಎಸ್‌ಡಿಎಂಸಿ ಸದಸ್ಯರು, ಅಕ್ಷರ ದಾಸೋಹ ಸಿಬ್ಬಂದಿಗಳು ಹಾಗೂ ಶಾಲಾ ಮಕ್ಕಳು ಭಾಗವಹಿಸಿದರು.

LEAVE A REPLY

Please enter your comment!
Please enter your name here