ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ವಿದ್ಯಾರ್ಥಿಗಳು ಪುತ್ತೂರಿನ ಸಂತ ಫಿಲೋಮಿನಾ ಪದವಿಪೂರ್ವ ವಿದ್ಯಾಲಯದಲ್ಲಿ ಇತ್ತೀಚೆಗೆ ನಡೆದ ಫಿಲೋ ಪ್ರತಿಭಾ 2023 ಸ್ಪರ್ಧಾ ಕಾರ್ಯಕ್ರಮದಲ್ಲಿ ಹಲವು ಬಹುಮಾನಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಆರ್ಟಿಫೀಶಿಯಲ್ ಇಂಟೆಲಿಜನ್ಸ್ ಸ್ಪರ್ಧೆಯಲ್ಲಿ ಒಂಬತ್ತನೇ ತರಗತಿಯ ವಿದ್ಯಾರ್ಥಿ ಅದ್ವೈತ ಕೃಷ್ಣ ತೃತೀಯ ಸ್ಥಾನ ಪಡೆದರೆ, ಹತ್ತನೇ ತರಗತಿ ವಿದ್ಯಾರ್ಥಿಗಳಾದ ಜಶ್ವಿತ್, ಅಭಿನವ, ಒಂಬತ್ತನೇ ತರಗತಿ ವಿದ್ಯಾರ್ಥಿ ಮನಸ್ವಿತ್ ಭಂಡಾರಿ, ಎಂಟನೇ ತರಗತಿಯ ವಿದ್ಯಾರ್ಥಿ ಪ್ರದ್ಯುಮ್ ವಿಜಯ್ ಸಾಮಾಜಿಕ ಜಾಗೃತಿ ಅರಿವು ಮೂಡಿಸುವ ಮ್ಯಾಡ್ ಆಡ್ ಶೋ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ.
ಅಂತೆಯೇ ಹತ್ತನೇ ತರಗತಿಯ ಅದ್ವಿಕ್ ಕಲ್ಲೂರಾಯ ಮತ್ತು ಅವನೀಶಕೃಷ್ಣ ವಿಜ್ಞಾನ ಮಾದರಿ ಸ್ಪರ್ಧೆಯಲ್ಲಿ ತೃತೀಯ ಹಾಗೂ ಹತ್ತನೇ ತರಗತಿ ವಿದ್ಯಾರ್ಥಿ ಆತ್ರೇಯ ಒಂಬತ್ತನೇ ತರಗತಿ ವಿದ್ಯಾರ್ಥಿಗಳಾದ ಆದ್ಯ ಎಂ.ಎ, ಸಾರಿಕಾ ಎಂಟನೇ ತರಗತಿ ವಿದ್ಯಾರ್ಥಿಗಳಾದ ಪ್ರಿಯಾಂಶು ರಾವ್, ವೈಷ್ಣವಿ ಎಂ. ಆರ್, ರಕ್ಷಾ ಎಸ್. ಎಸ್. ಜಾನಪದ ಗೀತೆಯಲ್ಲಿ ತೃತೀಯ ಸ್ಥಾನವನ್ನು ತಮ್ಮದಾಗಿಸಿಕೊಂಡಿದ್ದಾರೆ. ಬಹುಮಾನ ವಿಜೇತ ವಿದ್ಯಾರ್ಥಿಗಳನ್ನು ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ವತಿಯಿಂದ ಅಭಿನಂದಿಸಲಾಯಿತು.