
ಕಡಬ: ಕಡಬವನ್ನು ನೂತನ ತಾಲೂಕನ್ನಾಗಿ ರಚಿಸಲಾಗಿದ್ದು, ಸದ್ರಿ ತಾಲೂಕಿಗೆ ಲೋಕೋಪಯೋಗಿ ಇಲಾಖೆಯ ಉಪವಿಭಾಗದ ಕಛೇರಿಯನ್ನು ಪ್ರಾರಂಭಿಸಿರುವುದಿಲ್ಲ ಪ್ರಸ್ತುತ ಸುಬ್ರಹ್ಮಣ್ಯದಲ್ಲಿ ಲೋಕೋಪಯೋಗಿ ಉಪವಿಭಾಗವಿದ್ದು, ಅದನ್ನು ಕಡಬಕ್ಕೆ ಸ್ಥಳಾಂತರಿಸುವಂತೆ ಸುಳ್ಯ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಬೆಂಗಳೂರು ಕಛೇರಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು. ಮನವಿಗೆ ಸ್ಪಂದಿಸಿದ ಸಚಿವರು ಪರಿಶೀಲಿಸಿ ಬೇಕಾದ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.