





ಪುತ್ತೂರು: ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಶ್ರೇಯೋಭಿವೃದ್ಧಿಗಾಗಿ ಇರುವ “ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ” ಯಲ್ಲಿ ತಪ್ಪು ನಿರ್ಣಯಗಳನ್ನು ತೆಗೆದುಕೊಳ್ಳುತ್ತಿದ್ದು ಈ ಕುರಿತು ಸಂಘವು ಹಲವಾರು ಬಾರಿ ಮಂಡಳಿಯ ಉನ್ನತ ಅಧಿಕಾರಿಗಳು ಮತ್ತು ಕಾರ್ಮಿಕ ಸಚಿವರನ್ನು ಭೇಟಿ ಮಾಡಿ ಸಮಸ್ಯೆಗಳ ಬಗ್ಗೆ ವಿವರಿಸಿ ಚರ್ಚಿಸಿ ಅವುಗಳನ್ನು ಶೀಘ್ರ ಪರಿಹರಿಸುವಂತೆ ವಿನಂತಿಸಲಾಗಿದ್ದರೂ ಸರಕಾರ ಏಕಪಕ್ಷೀಯ ನಿರ್ಧಾರ ಕೈಗೊಳ್ಳುತ್ತಿದ್ದಾರೆಂದು ಆಕ್ಷೇಪಿಸಿ ಪುತ್ತೂರು ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ಬಿಎಮ್ಎಸ್ ಮಜ್ದೂರು ಸಂಘದಿಂದ ಪ್ರತಿಭಟನೆ ನಡೆಯಿತು.










