ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎಂ.ಸಿ.ಎ ವಿಭಾಗಕ್ಕೆ 100%

0

ಪುತ್ತೂರು: ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಎಂ.ಸಿ.ಎ ವಿಭಾಗದ ವಿದ್ಯಾರ್ಥಿಗಳ ಫಲಿತಾಂಶವು ಪ್ರಕಟಗೊಂಡಿದ್ದು, ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎಂ.ಸಿ.ಎ ವಿಭಾಗದ ವಿದ್ಯಾರ್ಥಿಗಳು 100% ಫಲಿತಾಂಶದೊಂದಿಗೆ ಉತ್ತಮ ಸಾಧನೆಯನ್ನು ಮಾಡಿದ್ದಾರೆ. ಕಳೆದ ಸೆಪ್ಟೆಂಬರ್ ತಿಂಗಳಿನಲ್ಲಿ ನಡೆದ ಪರೀಕ್ಷೆಗೆ ಕಾಲೇಜಿನಿಂದ ಒಟ್ಟು 51 ವಿದ್ಯಾರ್ಥಿಗಳು ಹಾಜರಾಗಿದ್ದು 48 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಮತ್ತು 3 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.


ಅರ್ಹ ವಿದ್ಯಾರ್ಥಿಗಳು ಈಗಾಗಲೇ ಕ್ಯಾಂಪಸ್ ನೇಮಕಾತಿಯ ಮೂಲಕ ವಿವಿಧ ಕಂಪೆನಿಗಳಿಗೆ ಆಯ್ಕೆಯಾಗಿದ್ದಾರೆ. 2021 ರಲ್ಲಿ ಪ್ರಾರಂಭವಾದ ಎಂಸಿಎ ವಿಭಾಗದ ಪ್ರಥಮ ತಂಡದ ಈ ವಿದ್ಯಾರ್ಥಿಗಳ ಸಾಧನೆಯನ್ನು ಆಡಳಿತ ಮಂಡಳಿಯ ಅಧ್ಯಕ್ಷ ವಿಶ್ವಾಸ್ ಶೆಣೈ, ಸಂಚಾಲಕ ಸುಬ್ರಮಣ್ಯ ಭಟ್.ಟಿ.ಎಸ್, ನಿರ್ದೇಶಕರು, ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ, ಎಂಸಿಎ ವಿಭಾಗದ ನಿರ್ದೇಶಕಿ ಡಾ.ವಂದನಾ.ಬಿ.ಎಸ್, ಉಪನ್ಯಾಸಕರು ಮತ್ತು ಸಿಬ್ಬಂದಿಗಳು ಶ್ಲಾಘಿಸಿದ್ದಾರೆ.

LEAVE A REPLY

Please enter your comment!
Please enter your name here