ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಯುವ ಮತ್ತು ಜನ್ಮ ಫೌಂಡೇಷನ್ ಟ್ರಸ್ಟ್ ಪುತ್ತೂರು ಇದರ ನೇತೃತ್ವದಲ್ಲಿ ಕೆ.ವಿ.ಜಿ. ದಂತ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಸುಳ್ಯ ಹಾಗೂ ಕೊಡಿಪ್ಪಾಡಿ ಗ್ರಾಮ ಪಂಚಾಯತ್ ಇವರ ಸಹಯೋಗದಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರ ಅ.11ರಂದು ಬೆ.9.30ರಿಂದ ಮ.1.30ರ ವರೆಗೆ ಕೊಡಿಪ್ಪಾಡಿ ಗ್ರಾಮ ಪಂಚಾಯತ್‌ನಲ್ಲಿ ನಡೆಯಲಿದೆ.
ಅದೇ ದಿನ ಬೆ.9.00ರಿಂದ 12.30ರ ತನಕ ಸ್ಥಳದಲ್ಲೇ ಹೆಸರು ನೊಂದಣೆ ಮಾಡಿಕೊಳ್ಳಲಾಗುವುದು. ಶಿಬಿರದಲ್ಲಿ ದಂತ ಕುಳಿ ತುಂಬುವಿಕೆ, ಹಲ್ಲಿನ ಸ್ವಚ್ಛತೆ, ಹಲ್ಲು ಕೀಳುವಿಕೆ, ಕೃತಕ ದಂತ ಜೋಡಣೆ ಮಾಹಿತಿ ಇತ್ಯಾದಿ ಚಿಕಿತ್ಸೆಗಳು ಲಭ್ಯವಿರುತ್ತದೆ.ಸಾರ್ವಜನಿಕರು ಈ ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳುವಂತೆ ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.