ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ: ರಾಮಕುಂಜ ಆ.ಮಾ.ಶಾಲೆಯ ಅನ್ವೇಶ್‌ಗೆ ಚಿನ್ನದ ಪದಕ

0

ರಾಮಕುಂಜ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಹಯೋಗದಲ್ಲಿ ಮಂಗಳೂರಿನಲ್ಲಿ ನಡೆದ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆಯ ೮ನೇ ತರಗತಿಯ ವಿದ್ಯಾರ್ಥಿ ಅನ್ವೇಶ್ ಅವರು ಚಿನ್ನದ ಪದಕ ಹಾಗೂ ಪ್ರಶಸ್ತಿ ಪತ್ರದೊಂದಿಗೆ ಶಿವಮೊಗ್ಗದಲ್ಲಿ ನಡೆಯುವ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಇವರಿಗೆ ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ ರೈಯವರ ಮಾರ್ಗದರ್ಶನದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರೇಮಾ ಬಿ, ರಾಘವ್ ಹಾಗೂ ಮೂರ್ತಿಯವರು ತರಬೇತಿ ನೀಡಿದ್ದರು. ಸಂಸ್ಥೆಯ ಆಡಳಿತಾಧಿಕಾರಿ ಆನಂದ್ ಎಸ್.ಟಿ, ವ್ಯವಸ್ಥಾಪಕ ರಮೇಶ್ ರೈ ಆರ್.ಬಿ, ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಗಾಯತ್ರಿ ಯು.ಎನ್, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಲೋಹಿತಾ ಎ ಹಾಗೂ ಶಿಕ್ಷಕ-ಶಿಕ್ಷಕೇತರ ವೃಂದದವರು ಸಹಕರಿಸಿದರು.

LEAVE A REPLY

Please enter your comment!
Please enter your name here