ಪುತ್ತೂರು: ನೆಹರುನಗರದ ವಿವೇಕಾನಂದ ಸೆಂಟ್ರಲ್ ಸ್ಕೂಲ್ ನಲ್ಲಿ ಸೈಬರ್ ಭದ್ರತೆಯ ಕುರಿತು ಜಾಗೃತಿ ಕಾರ್ಯಕ್ರಮ ಅ. 10 ರಂದು ನಡೆಯಿತು.
ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಪುತ್ತೂರು ಮಹಿಳಾ ವಿಭಾಗದ ಪೋಲೀಸ್ ಸಬ್ ಇನ್ಸ್ಪೆಕ್ಟರ್ ಭವಾನಿ ಸಮಾಜಕ್ಕೆ ಬಾಧಕವಾಗಿರುವ ಸೈಬರ್ ಅಪರಾಧ ಮತ್ತು ಸಾಮಾಜಿಕ ಜಾಲತಾಣಗಳ ಒಳಿತು ಮತ್ತು ಕೆಡುಕುಗಳ ಕುರಿತು ಮಾಹಿತಿ ನೀಡಿ ಮಕ್ಕಳು ತಮ್ಮ ಭವಿಷ್ಯಕ್ಕೆ ತಳಪಾಯದಂತಿರುವ ಈ ವಿದ್ಯಾರ್ಥಿ ಜೀವನದಲ್ಲಿ ವಯೋಸಹಜವಾದ ಯಾವುದೇ ರೀತಿಯ ಆಕರ್ಷಣೆಗಳಿಗೆ ಒಳಗಾಗದಂತೆ ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ, ವಿವೇಕಾನಂದ ಸೆಂಟ್ರಲ್ ಸ್ಕೂಲ್ ನ ಶಾಲಾ ಆಡಳಿತ ಮಂಡಳಿಯ ಸದಸ್ಯ ನಿರೀಕ್ಷಿತ್ ರೈ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಪ್ರಾಂಶುಪಾಲೆ ಸಿಂಧೂ.ವಿ.ಜಿ, ಉಪಪ್ರಾಂಶುಪಾಲೆ ಹೇಮಾವತಿ ಎಂ.ಎಸ್ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಿಕ್ಷಕಿಯರಾದ ರೇಷ್ಮಾ ಕಾರ್ಯಕ್ರಮವನ್ನು ನಿರೂಪಿಸಿ, ಲತಾಶಂಕರಿ ವಂದಿಸಿದರು.