ಪುತ್ತೂರು: ಹೆಚ್ ಪಿ ಆರ್ ನರ್ಸಿಂಗ್ ಮತ್ತು ಪ್ಯಾರಾಮೆಡಿಕಲ್ ಕಾಲೇಜಿನಲ್ಲಿ ಮಾನಸಿಕ ಆರೋಗ್ಯ ದಿನಾಚರಣೆಯ ಅಂಗವಾಗಿ ಮಾನಸಿಕ ಅಸ್ವಸ್ಥತೆಯ ಬಗ್ಗೆ ವೈದ್ಯರಿಂದ ಮಾಹಿತಿ ಕಾರ್ಯಾಗಾರ ಅ.13ರಂದು ಹೆಚ್ ಪಿ ಆರ್ ಕಾಲೇಜು ಸಭಾಂಗಣದಲ್ಲಿ ನಡೆಯಿತು.
ಪುತ್ತೂರಿನ ಪ್ರಧಾನ ವ್ಯವಹಾರಿಕ ನ್ಯಾಯಾಧೀಶರಾದ ಅರ್ಚನಾ ಕೆ ಉಣ್ಣಿತಾನ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪುತ್ತೂರು ವಕೀಲರ ಸಂಘದ ಕೋಶಾಧಿಕಾರಿ ಶ್ಯಾಮ್ ಪ್ರಸಾದ್ ಕೈಲಾರ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪುತ್ತೂರು ಹೆಚ್ಚುವರಿ ವ್ಯವಹಾರಿಕ ನ್ಯಾಯಾಧೀಶರಾದ ಯೊಗೇಂದ್ರ ಶೆಟ್ಟಿ ಮತ್ತು ಹೆಚ್ ಪಿ ಆರ್ ಕಾಲೇಜಿನ ಪ್ರಾಂಶುಪಾಲೆ ಇವ್ನೀಸ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಪುತ್ತೂರು ವಕೀಲರ ಸಂಘದ ಕಾರ್ಯದರ್ಶಿ ಸೀಮಾ ನಾಗರಾಜ್ ಗೌರವ ಉಪಸ್ಥಿತಿಯಲ್ಲಿ ಮಂಗಳೂರಿನ ಖ್ಯಾತ ಮಾನಸಿಕ ರೋಗ ತಜ್ಞ ಡಾ. ಜಯಂತ್ ಕುಮಾರ್, ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾನಸಿಕ ಅಸ್ವಸ್ಥತೆ ಬಗ್ಗೆ ಉಪನ್ಯಾಸ ನೀಡಿದರು. ಪುತ್ತೂರು ತಾಲೂಕು ಕಾನೂನು ಸೇವೆಗಳ ಸಮಿತಿಯ ಪಾರಾಲೀಗಲ್ ವಾಲೆಂಟೀಯರ್ ನಯನಾ ರೈ ಸಂಯೋಜನೆಯಲ್ಲಿ ಉಪನ್ಯಾಸಕಿ ಅನುಷಾ ಕಾರ್ಯಕ್ರಮದ ನಿರೂಪಣೆ ಮಾಡಿದರು. ನಯನಾ ರೈ ಸ್ವಾಗತಿಸಿ, ಉಪನ್ಯಾಸಕಿ ರೇಣುಕಾ ಜಿ ವಂದನಾರ್ಪಣೆಗೈದರು.