ಪುತ್ತೂರು: ಪುತ್ತೂರು ಶ್ರೀ ಶಾರದಾ ಭಜನಾ ಮಂದಿರದಲ್ಲಿ 89ನೇ ನವರಾತ್ರಿ ಉತ್ಸವ 7ನೇ ದಿನದ ಸಾಂಸ್ಕೃತಿಕ ಕಾರ್ಯಕ್ರಮ ಅ.21ರಂದು ಸಂಜೆ ನಡೆಯಿತು. ಉದ್ಘಾಟನೆಯನ್ನು ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ನೆರವೇರಿಸಿದರು.
ಹಿರಿಯ ಯಕ್ಷಗಾನ ಅರ್ಥಧಾರಿ ಉಜಿರೆ ಅಶೋಕ್ ಭಟ್, ಯಕ್ಷಗಾನ ಅಕಾಡಮಿ ಮಾಜಿ ಸದಸ್ಯೆ ಆರತಿ ಪಟ್ರಮೆ, ಮಂದಿರದ ಅಧ್ಯಕ್ಷ ಸಾಯಿರಾಮ ರಾವ್, ಕಾರ್ಯದರ್ಶಿ ಜಯಂತ್ ಉರ್ಲಾಂಡಿ, ಜತೆ ಕಾರ್ಯದರ್ಶಿ ಯಶವಂತ್ ಆಚಾರ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಉತ್ಸವ ಸಮಿತಿ ಸಂಚಾಲಕ ಪಿ.ಜಿ. ಜಗನ್ನಿವಾಸ ರಾವ್ ಕಾರ್ಯಕ್ರಮ ನಿರೂಪಿಸಿದರು. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಜಿಲ್ಲೆಯ ಸುಪ್ರಸಿದ್ಧ ಕಲಾವಿದರಿಂದ ಯಕ್ಷಗಾನ ತಾಳಮದ್ದಲೆ ನಡೆಯಿತು.