ಹಿರೇಬಂಡಾಡಿ: ಅ.26 ಮತ್ತು 27ರಂದು ತಾಲೂಕು ಮಟ್ಟದ ಕ್ರೀಡಾಕೂಟ

0

ಉದ್ಯೋಗಖಾತ್ರಿಯಲ್ಲಿ ನಿರ್ಮಾಣವಾದ ಸುಜಜ್ಜಿತ ಕ್ರೀಡಾಂಗಣ

ಹಿರೇಬಂಡಾಡಿ: ಉಪ್ಪಿನಂಗಡಿ: ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಹಿರೇಬಂಡಾಡಿ ಸರಕಾರಿ ಪ್ರೌಢಶಾಲೆಯಲ್ಲಿ ಸುಸಜ್ಜಿತ ಕ್ರೀಡಾಂಗಣ ನಿರ್ಮಾಣವಾಗಿದ್ದು, ಪುತ್ತೂರು ಶೈಕ್ಷಣಿಕ ವಲಯದ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕರ ಹಾಗೂ ಬಾಲಕಿಯರ ಕ್ರೀಡಾಕೂಟ ‘ಕ್ರೀಡಾಮೃತ’ ಇದೇ ಕ್ರೀಡಾಂಗಣದಲ್ಲಿ ಅ.26 ಮತ್ತು 27ರಂದು ನಡೆಯಲಿದೆ. ಈ ಕ್ರೀಡಾಕೂಟವನ್ನು ಊರಿನ ಕ್ರೀಡಾ ಹಬ್ಬವಾಗಿ ನಡೆಸಲು ತಯಾರಿ ನಡೆಸಲಾಗಿದೆ ಎಂದು ಮಾಜಿ ಶಾಸಕ, ಕ್ರೀಡಾಕೂಟದ ಸ್ವಾಗತ ಸಮಿತಿಯ ಅಧ್ಯಕ್ಷ ಸಂಜೀವ ಮಠಂದೂರು ತಿಳಿಸಿದರು.
ಶಾಲೆಯಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಸುಮಾರು ತಡೆಗೋಡೆ ಸೇರಿದಂತೆ ಕ್ರೀಡಾಂಗಣದ ಕಾಮಗಾರಿಯು ಸುಮಾರು ೨೦ ಲಕ್ಷ ರೂ. ವೆಚ್ಚದಲ್ಲಿ ಹಿರೇಬಂಡಾಡಿ ಗ್ರಾ.ಪಂ.ನ ವತಿಯಿಂದ ನಿರ್ಮಾಣವಾಗಿದ್ದು, ಕೆಲ ಕಾಮಗಾರಿಗಳಷ್ಟೇ ಬಾಕಿಯಿವೆ. ಇದು 200 ಮೀ. ಓಟದ ಮಾದರಿ ಕ್ರೀಡಾಂಗಣವಾಗಿದ್ದು 1.25 ಮೀ. ಅಗಲದ 9 ಓಟದ ಪಥಗಳಿವೆ. ಕ್ರೀಡಾಂಗಣದಲ್ಲಿ ಒಳಚರಂಡಿ ವ್ಯವಸ್ಥೆಯಿದ್ದು, ನೀರು ಸರಬರಾಜಿಗೂ ವ್ಯವಸ್ಥೆ ಕಲ್ಪಿಸಲಾಗಿದೆ. ಉದ್ದಜಿಗಿತ, ಎತ್ತರ ಜಿಗಿತ, ಚಕ್ರ ಎಸೆತ, ಗುಂಡೆಸೆತ ಹಾಗೂ ಈಟಿ ಎಸೆತಕ್ಕೆ ಪ್ರತ್ಯೇಕ ವ್ಯವಸ್ಥೆಗಳಿವೆ. ಸರಕಾರಿ ಶಾಲೆಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಇಂತಹ ಸುಸಜ್ಜಿತ ಕ್ರೀಡಾಂಗಣ ನಿರ್ಮಾಣವಾಗಿರುವುದು ತಾಲೂಕಿನಲ್ಲಿಯೇ ಪ್ರಥಮವಾಗಿದ್ದು, ಗ್ರಾಮೀಣ ಪ್ರದೇಶದ ಸರಕಾರಿ ಶಾಲೆಯೊಂದರಲ್ಲಿ ತಾಲೂಕು ಮಟ್ಟದ ಕ್ರೀಡಾಕೂಟ ನಡೆಯುತ್ತಿರುವುದು ನಮಗೆ ಹಮ್ಮೆಯ ವಿಷಯವಾಗಿದೆ ಎಂದರು.


ಅ.26ರಂದು ಬೆಳಗ್ಗೆ 9ರಿಂದ ಕ್ರೀಡಾಕೂಟಕ್ಕೆ ಚಾಲನೆ ದೊರಕಲಿದ್ದು, ಹಿರೇಬಂಡಾಡಿ ಗ್ರಾ.ಪಂ. ಅಧ್ಯಕ್ಷ ಸದಾನಂದ ಶೆಟ್ಟಿ ಧ್ವಜಾರೋಹಣ ನೆರವೇರಿಸಲಿದ್ದಾರೆ. ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ. ಖಾದರ್ ಫರೀದ್ ಅವರ ಘನ ಉಪಸ್ಥಿತಿಯಲ್ಲಿ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಲಿದ್ದಾರೆ. ಶಿಕ್ಷಣ ಇಲಾಖೆಯ ಸಚಿವರಾದ ಎಸ್. ಮಧು ಬಂಗಾರಪ್ಪ ಗೌರವ ಉಪಸ್ಥಿತಿ ಇರಲಿದ್ದು, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅಧ್ಯಕ್ಷತೆ ವಹಿಸಲಿದ್ದಾರೆ. ಅತಿಥಿಗಳಾಗಿ ಸಂಸದ ನಳಿನ್ ಕುಮಾರ್ ಕಟೀಲ್, ರಾಜ್ಯ ಸಭಾ ಸದಸ್ಯ ಡಿ. ವೀರೇಂದ್ರ ಹೆಗ್ಗಡೆ, ಸುಳ್ಯ ಶಾಸಕಿ ಕು. ಭಾಗೀರಥಿ ಮುರುಳ್ಯ, ವಿಧಾನ ಪರಿಷತ್ ಸದಸ್ಯರಾದ ಕೋಟ ಶ್ರೀನಿವಾಸ ಪೂಜಾರಿ, ಬಿ.ಎಂ. ಫಾರೂಕ್, ಹರೀಶ್ ಕುಮಾರ್ ಕೆ., ಎಸ್.ಎಲ್. ಭೋಜೇಗೌಡ, ಪ್ರತಾಪ್ ಸಿಂಹ ನಾಯಕ್ ಕೆ., ಮಂಜುನಾಥ್ ಭಂಡಾರಿ, ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತ ಗಿರೀಶ್ ನಂದನ್, ತಹಶೀಲ್ದಾರ್ ಶಿವಶಂಕರ್, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ ಎಚ್., ಕ್ಷೇತ್ರ ಶಿಕ್ಷಣಾಧಿಕಾರಿ ಲೊಕೇಶ್ ಎಸ್. ಆರ್., ಗ್ರಾಮೀಣ ಉದ್ಯೋಗದ ಸಹಾಯಕ ನಿರ್ದೇಶಕಿ ಶ್ರೀಮತಿ ಶೈಲಜಾ, ಹಿರೇಬಂಡಾಡಿ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ದಿನೇಶ್ ಶೆಟ್ಟಿ ಹಾಗೂ ಪುತ್ತೂರು ಶೈಕ್ಷಣಿಕ ವಲಯದ ಎಲ್ಲಾ ಶಿಕ್ಷಕರ ಸಂಘಗಳ ಅಧ್ಯಕ್ಷರು ಹಾಗೂ ತಾಲೂಕಿನ ಜಿಲ್ಲಾ ಸಂಘಗಳ ಪದಾಧಿಕಾರಿಗಳು ಉಪಸ್ಥಿತರಿಲಿದ್ದಾರೆ. ಅ.27ರಂದು ಸಂಜೆ 3 ಗಂಟಗೆ ಸಮಾರೋಪ ಸಮಾರಂಭ ನಡೆಯಲಿದ್ದು, ಶಾಲಾ ಎಸ್‌ಡಿಎಂಸಿ ಕಾರ್ಯಾಧ್ಯಕ್ಷ ಸತೀಶ್ ಶೆಟ್ಟಿ ಹೆನ್ನಾಳ ಅಧ್ಯಕ್ಷತೆ ವಹಿಸಲಿದ್ದು, ಮಾಜಿ ಶಾಸಕ ಸಂಜೀವ ಮಠಂದೂರು ಬಹುಮಾನ ವಿತರಿಸಲಿದ್ದಾರೆ. ಅತಿಥಿಗಳಾಗಿ ಹಿರೇಬಂಡಾಡಿ ಗ್ರಾ.ಪಂ. ಉಪಾಧ್ಯಕ್ಷೆ ಶಾಂಭವಿ, ಪಿ.ಎಂ. ಪೋಷಣ್ ಮಧ್ಯಾಹ್ನ ಉಪಹಾರ ಯೋಜನೆಯ ಸಹಾಯಕ ನಿರ್ದೇಶಕ ವಿಷ್ಣುಪ್ರಸಾದ್ ಸಿ., ಪುತ್ತೂರು ಕ್ಷೇತ್ರ ಸಂಪನ್ಮೂಲ ಕೇಂದ್ರದ ಪ್ರಭಾರ ಸಮನ್ವಯಾಧಿಕಾರಿ ನವೀನ್ ಸ್ಟೀಫನ್ ವೇಗಸ್ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
೮೯೯ ಕ್ರೀಡಾಪಟುಗಳು ಈ ಕ್ರೀಡಾಕೂಟದಲ್ಲಿ ಸಾಧನೆ ತೋರಲಿದ್ದು, ಒಟ್ಟು 25 ಸ್ಪರ್ಧೆಗಳಿವೆ. 6 ವಿಭಾಗದಲ್ಲಿ ಸ್ಪರ್ಧೆಗಳು ನಡೆಯಲಿವೆ. 104 ಮಂದಿ ದೈಹಿಕ ಶಿಕ್ಷಣ ಶಿಕ್ಷಕರು ತೀರ್ಪುಗಾರರಾಗಿ ಭಾಗವಹಿಸಲಿದ್ದು, 30 ಶಿಕ್ಷಕರು ಸ್ಪರ್ಧಾ ನಿರ್ವಾಹಕರಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಮಾಹಿತಿ ನೀಡಿದ ಅವರು, ಈ ಶಾಲೆ ಆರಂಭವಾಗಿ 16 ವರ್ಷಗಳಾಗಿದ್ದು, ಎಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶವನ್ನು ಗಳಿಸುವ ಮೂಲಹ ಹ್ಯಾಟ್ರಿಕ್ ಸಾಧನೆ ಮಾಡಿದೆ ಎಂದರು.
ಪತ್ರಿಕಾಗೋಷ್ಟಿಯಲ್ಲಿ ಹಿರೇಬಂಡಾಡಿ ಗ್ರಾ.ಪಂ. ಅಧ್ಯಕ್ಷ ಸದಾನಂದ ಶೆಟ್ಟಿ, ಉಪಾಧ್ಯಕ್ಷೆ ಶಾಂಭವಿ, ಶಾಲಾ ಎಸ್‌ಡಿಎಂಸಿ ಕಾರ್ಯಾಧ್ಯಕ್ಷ ಸತೀಶ್ ಶೆಟ್ಟಿ ಹೆನ್ನಾಳ, ಕ್ರೀಡಾಂಗಣ ಸಮಿತಿಯ ಅಧ್ಯಕ್ಷ ಶ್ರೀಧರ ಮಠಂದೂರು, ಶಾಲಾ ಮುಖ್ಯಗುರು ಹರಿಕಿರಣ್ ಕೆ. ಗ್ರಾಮ ಪಂಚಾಯತ್ ಸದಸ್ಯ ಹಮ್ಮಬ್ಬ ಶೌಕತ್ ಅಲಿ, ಪುರುಷೋತ್ತಮ ಮುಂಗ್ಲಿಮನೆ, ಬಾಲಚಂದ್ರ ಗೌಡ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here