’ಪುತ್ತೂರ‍್ದ ಪಿಲಿಗೊಬ್ಬು-2023’ ಉದ್ಘಾಟನಾ ಕಾರ್ಯಕ್ರಮ

0

ಪುತ್ತೂರು:ಹುಲಿವೇಷ ಕುಣಿತ, ತುಳುನಾಡಿನ ಧಾರ್ಮಿಕ ಹಿನ್ನೆಲೆ ಇರುವ ಜಾನಪದ ಕಲೆ, ಈ ಕಲೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ವಿಜಯ ಸಾಮ್ರಾಟ್ ಆಶ್ರಯದಲ್ಲಿ ’ಪುತ್ತೂರ‍್ದ ಪಿಲಿಗೊಬ್ಬು-2023’ ಅನ್ನು ಇತಿಹಾಸ ಪ್ರಸಿದ್ದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರ ಮಾರು ಗದ್ದೆಯಲ್ಲಿ ಅ.22ರಂದು ನಡೆಯುತ್ತಿದ್ದು ಶಾಸಕ ಅಶೋಕ್ ಕುಮಾರ್ ರೈ ಪಿಲಿಗೊಬ್ಬು ಕಾರ್ಯಕ್ರಮ ಉದ್ಘಾಟಿಸಿದರು.


ಈ ಸಂದರ್ಭದಲ್ಲಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ,ಹಿರಿಯ ವೈದ್ಯ ಡಾ.ಎಂ.ಕೆ.ಪ್ರಸಾದ್, ಮಾಜಿ ಶಾಸಕ ಸಂಜೀವ ಮಠಂದೂರು, ಉಮೇಶ್ ನಾಯಕ್ ಸಹಿತ ಹಲವಾರು ಮಂದಿ ಗಣ್ಯರು ಉಪಸ್ಥಿತರಿದ್ದರು. ವಿಜಯ ಸಾಮ್ರಾಟ್ ಪುತ್ತೂರು ಇದರ ಸ್ಥಾಪಕ ಅಧ್ಯಕ್ಷ ಮತ್ತು ಪಿಲಿಗೊಬ್ಹು ಸಮಿತಿ ಗೌರವಾಧ್ಯಕ್ಷ ಸಹಜ್ ರೈ ಬಳಜ್ಜ, ಸ್ವಾಗತಿಸಿ, ಸಹಾಯಕ ಕಮೀಷನರ್ ಗಿರೀಶ್‌ ನಂದನ್‌ ಪ್ರಾಸ್ತಾವಿಕವಾಗಿ ಮಾತನಾಡಿದರು.

LEAVE A REPLY

Please enter your comment!
Please enter your name here