ಪುತ್ತೂರು: ವರ್ತಕರ ಸಂಘ ಕುಂಬ್ರ ಇದರ ಆಶ್ರಯದಲ್ಲಿ ಭಾರತೀಯ ಅಂಚೆ ಇಲಾಖೆ ಪುತ್ತೂರು ಇವರ ಸಹಯೋಗದೊಂದಿಗೆ ಬೃಹತ್ ಆಧಾರ್ ನೋಂದಾವಣೆ ಮತ್ತು ತಿದ್ದುಪಡಿ ಶಿಬಿರ ಅ.30 ಮತ್ತು 31 ರಂದು ಕುಂಬ್ರ ಅಕ್ಷಯ ಆರ್ಕೇಡ್ನ ಸಭಾ ಭವನದಲ್ಲಿ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಅ.23 ರಂದು ನ್ಯೂಫ್ಯಾಮಿಲಿ ಕಾಂಪ್ಲೆಕ್ಸ್ನಲ್ಲಿರುವ ವರ್ತಕರ ಸಂಘದ ಕಛೇರಿ ಆವರಣದಲ್ಲಿ ನಡೆಯಿತು.
ಪಟ್ಟೆ ಶಾಲಾ ಶಿಕ್ಷಕ ವಿಶ್ವನಾಥ ಗೌಡ ಬೊಳ್ಳಾಡಿಯವರು ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿ, ವರ್ತಕರ ಸಂಘವು ಕಳೆದ 19 ವರ್ಷಗಳಿಂದ ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸುತ್ತಿದ್ದು ತನ್ನ 20 ನೇ ವರ್ಷದ ಪ್ರಥಮ ಕಾರ್ಯಕ್ರಮವಾಗಿ ಆಧಾರ್ ಮೇಳದಂತಹ ಉತ್ತಮ ಕಾರ್ಯಕ್ರಮ ಹಮ್ಮಿಕೊಂಡಿರುವುದು ಶ್ಲಾಘನೀಯ ಇದರ ಪ್ರಯೋಜನವನ್ನು ಪ್ರತಿಯೊಬ್ಬರು ಪಡೆದುಕೊಳ್ಳುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ವರ್ತಕರ ಸಂಘದ ಅಧ್ಯಕ್ಷ ರಫೀಕ್ ಅಲ್ರಾಯ, ಸ್ಥಾಪಕ ಅಧ್ಯಕ್ಷ ಶ್ಯಾಮ್ಸುಂದರ ರೈ ಕೊಪ್ಪಳ, ಪ್ರಧಾನ ಕಾರ್ಯದರ್ಶಿ ಭವ್ಯ ರೈ, ಕೋಶಾಧಿಕಾರಿ ಸಂಶುದ್ದೀನ್ ಎ.ಆರ್, ಉಪಾಧ್ಯಕ್ಷ ಉದಯ ಆಚಾರ್ಯ ಕೃಷ್ಣನಗರ, ಮಾಜಿ ಅಧ್ಯಕ್ಷ ನಾರಾಯಣ ಪೂಜಾರಿ ಕುರಿಕ್ಕಾರ, ಮಾಜಿ ಕಾರ್ಯದರ್ಶಿ ರಮೇಶ್ ಆಳ್ವ ಕಲ್ಲಡ್ಕ, ಉದ್ಯಮಿ ಡಿ.ಕೆ ಉಮ್ಮರ್, ಕಾರ್ಯಕಾರಿ ಸಮಿತಿ ಸದಸ್ಯ ಶಿವಪ್ರಸಾದ್, ಹರಿಪ್ರಸಾದ್ ಕೌಡಿಚ್ಚಾರ್ ಮತ್ತಿತರರು ಉಪಸ್ಥಿತರಿದ್ದರು.
ಮೇಳದಲ್ಲಿ ಸಿಗುವ ಸೇವೆಗಳು
ಆಧಾರ್ ಮೇಳದಲ್ಲಿ ಮುಖ್ಯವಾಗಿ ಹೊಸ ನೋಂದಾವಣೆ, ವಿಳಾಸ ಬದಲಾವಣೆ, ಹೆಸರು ಬದಲಾವಣೆ, ಜನ್ಮ ದಿನಾಂಕ ಬದಲಾವಣೆ, ಬಯೋಮೆಟ್ರಿಕ್ ಪರಿಷ್ಕರಣೆ, ಮೊಬೈಲ್ ನಂಬರ್ ಸೇರ್ಪಡೆ, ತಿದ್ದುಪಡಿ ಇತ್ಯಾದಿ ಸೇವೆಗಳು ಲಭ್ಯವಿದೆ. ಸಾರ್ವಜನಿಕರು ಅಗತ್ಯ ದಾಖಲೆಗಳೊಂದಿಗೆ ಮೇಳದಲ್ಲಿ ಭಾಗವಹಿಸಬಹುದು ಹೆಚ್ಚಿನ ಮಾಹಿತಿಗಾಗಿ 9901423745
ಅಥವಾ 9901889652 ಗೆ ಸಂಪರ್ಕಿಸಬಹುದು ಎಂದು ಸಂಘದ ಪ್ರಕಟಣೆ ತಿಳಿಸಿದೆ.