ಮಹಾಲಿಂಗೇಶ್ವರ ದೇವಸ್ಥಾನದ ಅನ್ನಛತ್ರ ಕಾಮಗಾರಿ ವೀಕ್ಷಿಸಿದ ಸಂಸದ ನಳಿನ್ ಕುಮಾರ್ ಕಟೀಲ್

0

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಇವತ್ತು ಅಭಿವೃದ್ಧಿಯತ್ತ ದಾಪುಕಾಲು ಹಾಕುತ್ತಿದೆ. ಹೊಸ ಸಮಿತಿ ಕೇಶವಪ್ರಸಾದ್ ಅವರ ತಂಡ ಹತ್ತಾರು ಮಾಸ್ಟರ್ ಪ್ಲಾನ್ ಹಾಕಿಕೊಂಡಿದ್ದಾರೆ. ಅದರಲ್ಲಿ ಸುಂದರವಾದ ಅನ್ನಛತ್ರ ಕಾರ್ಯಗಳು ಅತಿ ಶೀಘ್ರದಲ್ಲಿ ಮುಗಿಯಲಿ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಹೇಳಿದರು.


ಅ.24ರಂದು ಮಹಾಲಿಂಗೇಶ್ವರ ದೇವಸ್ಥಾನದ ಅನ್ನಛತ್ರದ ಕಾಮಗಾರಿಗಳನ್ನು ವೀಕ್ಷಣೆ ಮಾಡಿದ ಅವರು ರಥಬೀದಿಯಲ್ಲಿ ಅನ್ನಛತ್ರದ ನೀಲನಕಾಶೆಯನ್ನು ಉದ್ಘಾಟಿಸಿ, ಬಳಿಕ ದೇವಳದ ಕಚೇರಿಯಲ್ಲಿ ಅವರು ಮಾತನಾಡಿದರು.2013ರಲ್ಲಿ ದೇವಳದ ಜೀರ್ಣೋದ್ದಾರ ಆಗಿತ್ತು. ಆದರೆ ದೇವಳದ ಹೊರಾಂಣದ ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿ ಮೊದಲ ಹಂತದಲ್ಲಿ ಅನ್ನಛತ್ರ ಯೋಜನೆಯನ್ನು ಕೇಶವಪ್ರಸಾದ್ ಮುಳಿಯ ಆಡಳಿತ ಸಮಿತಿ ಕೈಗೆತ್ತಿಕೊಂಡಿದ್ದು, ಸುಂದರ ವಿನ್ಯಾಸದೊಂದಿಗೆ ತಂತ್ರಜ್ಞರ ಸಲಹೆ ಮತ್ತು ವಾಸ್ತು ಶಿಲ್ಪಿಗಳ ಸಲಹೆ ಮೇರೆಗೆ ಸುಂದರವಾದ ಅನ್ನಛತ್ರ ನಿರ್ಮಾಣ ಆಗುತ್ತಿದೆ. ಈಗಾಗಲೇ ವೇಗದಲ್ಲಿ ಕಾಮಗಾರಿ ನಡೆಯುತ್ತಿದೆ. ಅತಿ ಶೀಘ್ರದಲ್ಲಿ ಕಾಮಗಾರಿಗಳು ಪೂರ್ಣಗೊಳ್ಳಲಿ. ಭಕ್ತರ ಸಹಕಾರ ಮತ್ತು ಸಲಹೆಯು ದಾನದ ಮೂಲಕ ಬರುವಂತಾಗಲಿ ಎಂದರು. ಈ ಸಂದರ್ಭ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ ಅವರು ಅನ್ನಛತ್ರದಲ್ಲಿ ನಡೆಯುತ್ತಿರುವ ಮತ್ತು ಮುಂದೆ ಆಗುತ್ತಿರುವ ಕಾಮಗಾರಿಗಳ ಕುರಿತು ಮಾಹಿತಿ ನೀಡಿದರು. ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಶೇಖರ್ ನಾರಾವಿ, ರಾಮದಾಸ್ ಗೌಡ, ರವೀಂದ್ರನಾಥ ರೈ ಬಳ್ಳಮಜಲು, ಮಾಜಿ ಶಾಸಕ ಸಂಜೀವ ಮಠಂದೂರು, ನಗರಸಭೆ ನಿಕಟಪೂರ್ವ ಉಪಾಧ್ಯಕ್ಷೆ ವಿದ್ಯಾ ಆರ್ ಗೌರಿ, ಕರಾವಳಿ ಅಭಿವೃದ್ಧಿ ನಿಗಮದ ನಿಕಟಪೂರ್ವ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಬಿಜೆಪಿ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೋಟ್ಟು, ಟಿಎಪಿಸಿಎಂಎಸ್ ಅಧ್ಯಕ್ಷ ಕೃಷ್ಣಕುಮಾರ್ ರೈ, ಶಾರದೋತ್ಸವ ಸಮಿತಿ ಅಧ್ಯಕ್ಷ ರಾಜೇಶ್ ಬನ್ನೂರು, ಪುತ್ತೂರು ಕೋ ಓಪರೇಟಿವ್ ಟೌನ್ ಬ್ಯಾಂಕ್ ನಿರ್ದೇಶಕ ಚಂದ್ರಶೇಖರ್ ರಾವ್ ಬಪ್ಪಳಿಗೆ, ಹಿಂದು ಜಾಗರಣ ವೇದಿಕೆಯ ಮುಖಂಡ ದಿನೇಶ್ ಪಂಜಿಗ, ಪುರುಷೋತ್ತಮ ಮುಂಗ್ಲಿಮನೆ, ನಾಗೇಶ್ ಟಿ.ಎಸ್, ದೇವಳದ ಕಚೇರಿ ವ್ಯವಸ್ಥಾಪಕ ಹರೀಶ್ ಶೆಟ್ಟಿ ಸಹಿತ ಹಲವಾರು ಮಂದಿ ಈ ಸಂದರ್ಭ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here