





ಪುತ್ತೂರು: ಕರ್ನಾಟಕ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರು ಹಾಗೂ ದ.ಕ ಜಿಲ್ಲೆಯ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರನ್ನು ಭೇಟಿ ಮಾಡಿದ ಬೆಂಗಳೂರು ಕಂಬಳ ಸಮಿತಿ ಸದಸ್ಯರು ಬೆಂಗಳೂರು ಕಂಬಳ – ನಮ್ಮ ಕಂಬಳದ ಕಾರ್ಯಕ್ರಮಗಳ, ರೂಪುರೇಷೆಗಳ ಬಗ್ಗೆ ಚರ್ಚಿಸಿ, ಕಾರ್ಯಕ್ರಮಕ್ಕೆ ಆಹ್ವಾನಿಸಲಾಯಿತು. ಈ ವೇಳೆ ಕಂಬಳ ಕಾರ್ಯಕ್ರಮಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ಸಚಿವರು ತಿಳಿಸಿದರು.ಸಚಿವರನ್ನು ಭೇಟಿ ಮಾಡಿದ ನಿಯೋಗದಲ್ಲಿ ಸಂದರ್ಭದಲ್ಲಿ ಪುತ್ತೂರು ಶಾಸಕ, ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ರೈ, ಕಾರ್ಯಾಧ್ಯಕ್ಷ ಗುರುಕಿರಣ್, ಉಪಾಧ್ಯಕ್ಷ ಗುಣ ರಂಜನ್ ಶೆಟ್ಟಿ, ಪದಾಧಿಕಾರಿ ಉದಯ್ ಶೆಟ್ಟಿ ಉಪಸ್ಥಿತರಿದ್ದರು.












