ಪುತ್ತೂರು:ಶ್ರೀ ರಾಧಾ ಸುರಭಿ ಗೋ ಮಂದಿರ ರಾಷ್ಟ್ರೀಯ ಗೋ ಸೇವಾ ಸಂಸ್ಥಾನ, ಬ್ರಹ್ಮಗಿರಿ ಗೋವಿನತೋಟ ಪುದು, ಗೋ ಸೇವಾ ಗತಿವಿಧಿ, ಕರ್ನಾಟಕ ಇದರ ಜಂಟಿ ಆಶ್ರಯದಲ್ಲಿ ದಕ್ಷಿಣ ಕನ್ನಡ, ಕೊಡಗು, ಉಡುಪಿ, ಹಾಸನ ಜಿಲ್ಲೆಯಲ್ಲಿ ನಡೆಯುತ್ತಿರುವ ಗೋ ಯಾತ್ರೆಯು ಪುತ್ತೂರು ವಿವೇಕಾನಂದ ಮಹಾವಿದ್ಯಾಲಯಕ್ಕೆ ಆಗಮಿಸಿತ್ತು.
ಗೋವಿನ ಉಪಯೋಗ ಗೋಮೂತ್ರ ಗೋ ಹಾಲುಗಳ ಮೂಲಕ ತಯಾರಾಗುವ ಉತ್ಪನ್ನಗಳು ಹಾಗೆ ಅದರಲ್ಲಿರುವ ಔಷಧೀಯ ಗುಣಗಳನ್ನು ತಿಳಿಸಿ ಕೊಟ್ಟರು. ರಥಯಾತ್ರೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಶ್ರೀ ಭಕ್ತಿ ಭೂಷಣ್ ದಾಸ್ ಪ್ರಭೂಜೀ ನೀಡಿದರು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಪ್ರೊ.ವಿಷ್ಣು ಗಣಪತಿ ಭಟ್, ವಿಶೇಷ ಅಧಿಕಾರಿ ಡಾ. ಶ್ರೀಧರ್ ನಾಯಕ್, ಪರೀಕ್ಷಾಂಗ ಕುಲ ಸಚಿವ ಡಾ. ಶ್ರೀಧರ್ ಎಚ್.ಜಿ ಹಾಗೂ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಡಾ. ಅರುಣ್ ಪ್ರಕಾಶ್, ಉಪನ್ಯಾಸಕರು, ವಿದ್ಯಾರ್ಥಿಗಳು ಗೋಮಾತೆಗೆ ಪೂಜಿಸಿದರು.