ಸವಣೂರು ಮೊಗರು ಶಾಲೆಯಲ್ಲಿ ವಾಲ್ಮೀಕಿ ಜಯಂತಿ ಆಚರಣೆ

0

ಸವಣೂರು : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಸವಣೂರು ಮೊಗರು ಇಲ್ಲಿ ವಾಲ್ಮೀಕಿ ಜಯಂತಿಯನ್ನು ಪುಷ್ಪಾರ್ಚನೆ ಮಾಡುವುದರ ಮೂಲಕ ಆಚರಿಸಲಾಯಿತು.

ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಶಾಲಾ ಎಸ್. ಡಿ. ಎಂ. ಸಿ ಅಧ್ಯಕ್ಷ ರಫೀಕ್ ಎಂ. ಎ ವಹಿಸಿದ್ದರು. ಶಾಲಾ ಪ್ರಭಾರ ಮುಖ್ಯ ಗುರುಗಳಾದ ಜುಸ್ತಿನಾ ವಾಲ್ಮೀಕಿಗಳ ಜೀವನ ಚರಿತ್ರೆ ಹಾಗೂ ಅವರ ಆದರ್ಶಗಳ ಬಗ್ಗೆ ಮಾಹಿತಿ ನೀಡಿದರು. ಶಾಲಾ ಸಹಶಿಕ್ಷಕರಾದ ಜಾನಕಿ ಸ್ವಾಗತಿಸಿ, ಶ್ವೇತಾ ವಂದಿಸಿದರು. ಅತಿಥಿ ಶಿಕ್ಷಕರಾದ ದಯಾಮಣಿ ಸಹಕರಿಸಿದರು. ಪೋಷಕರಾದ ರುಬಿನಾ ಹಾಗೂ ವಿದ್ಯಾರ್ಥಿ ವೃಂದದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here