ಪುತ್ತೂರು: ಕುಂಬ್ರ ವರ್ತಕರ ಸಂಘದ ಆಶ್ರಯದಲ್ಲಿ ಭಾರತೀಯ ಅಂಚೆ ಇಲಾಖೆ ಪುತ್ತೂರು ಇದರ ಸಹಯೋಗದೊಂದಿಗೆ ಬೃಹತ್ ಆಧಾರ್ ನೋಂದಾವಣೆ ಹಾಗೂ ತಿದ್ದುಪಡಿ ಶಿಬಿರ ಅ.30 ಮತ್ತು 31 ರಂದು ಕುಂಬ್ರ ಅಕ್ಷಯ ಆರ್ಕೇಡ್ನ ಸಭಾ ಭವನದಲ್ಲಿ ನಡೆಯಲಿದೆ. ಬೆಳಿಗ್ಗೆಯಿಂದ ಸಂಜೆ ತನಕ ನಡೆಯುವ ಮೇಳವನ್ನು ಅ.30 ರಂದು ಪತ್ರಕರ್ತ ಸಿಶೇ ಕಜೆಮಾರ್ ಉದ್ಘಾಟಿಸಲಿದ್ದು, ಸಂಘದ ಅಧ್ಯಕ್ಷ ರಫೀಕ್ ಅಲ್ರಾಯ ಸಭಾಧ್ಯಕ್ಷತೆ ವಹಿಸಲಿದ್ದಾರೆ. ಅಂಚೆ ಇಲಾಖೆಯ ನವೀನ್ ಚಂದರ್ ಹಾಗೂ ಎ.ಗಣಪತಿ ಮರಾಡಿ ಅಲ್ಲದೆ ಅತಿಥಿಗಳಾಗಿ ಒಳಮೊಗ್ರು ಗ್ರಾಪಂ ಮಾಜಿ ಉಪಾಧ್ಯಕ್ಷ ಇಸುಬು ಕೆ, ಉದ್ಯಮಿ ಜಯಂತ ನಡುಬೈಲ್, ಸಂಘದ ಸ್ಥಾಪಕ ಅಧ್ಯಕ್ಷ ಶ್ಯಾಮಸುಂದರ ರೈ ಕೊಪ್ಪಳ, ಗೌರವ ಸಲಹೆಗಾರರಾದ ಅಬ್ದುಲ್ ರಹಿಮಾನ್ ಹಾಜಿ, ಕುಂಬ್ರ ದುರ್ಗಾಪ್ರಸಾದ್ ರೈ ಮತ್ತು ಚಂದ್ರಕಾಂತ ಶಾಂತಿವನ ಭಾಗವಹಿಸಲಿದ್ದಾರೆ. 31 ರಂದು ಸಂಜೆ ಸಮಾರೋಪ ಆಗಲಿದ್ದು ಸಂಘದ ಅಧ್ಯಕ್ಷ ರಫೀಕ್ ಅಲ್ರಾಯ ಸಭಾಧ್ಯಕ್ಷತೆ ವಹಿಸಲಿದ್ದು, ಡಾ|ಸತ್ಯವತಿ ಆರ್.ಆಳ್ವ, ಪತ್ರಕರ್ತ ಯೂಸುಫ್ ರೆಂಜಲಾಡಿ, ಭಜನಾ ಮಂದಿರದ ಅಧ್ಯಕ್ಷ ಪದ್ಮನಾಭ ರೈ ಅರೆಪ್ಪಾಡಿ, ಪ್ರಾಧ್ಯಾಪಕ ಅನೀಸ್ ಕೌಶರಿ, ಶಿಕ್ಷಕಿ ಜೂಲಿಯಾನ ಮೊರಸ್ ಭಾಗವಹಿಸಲಿದ್ದಾರೆ. ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳುವಂತೆ ಸಂಘದ ಅಧ್ಯಕ್ಷ ರಫೀಕ್ ಅಲ್ರಾಯ ಹಾಗೂ ಪದಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೇಳದಲ್ಲಿ ಹೊಸ ನೋಂದಾವಣೆ, ವಿಳಾಸ ಬದಲಾವಣೆ, ಹೆಸರು ಬದಲಾವಣೆ, ಜನ್ಮ ದಿನಾಂಕ ಬದಲಾವಣೆ, ಬಯೋಮೆಟ್ರಿಕ್(ಬೆರಳಚ್ಚು)ಪರಿಷ್ಕರಣೆ, ಮೊಬೈಲ್ ನಂಬರ್ ಸೇರ್ಪಡೆ, ತಿದ್ದುಪಡಿ ಇತ್ಯಾದಿ ಸೇವೆ ಸಿಗಲಿದೆ. ಗ್ರಾಹಕರು ಅಗತ್ಯ ದಾಖಲೆಗಳೊಂದಿಗೆ ಶಿಬಿರಕ್ಕೆ ಬಂದು ಪ್ರಯೋಜನ ಪಡೆದುಕೊಳ್ಳಬಹುದು. ಅರ್ಜಿ ಫಾರಂ ಕುಂಬ್ರದ ಎಲ್ಲಾ ಜೆರಾಕ್ಸ್ ಅಂಗಡಿಗಳಲ್ಲಿ ಲಭ್ಯವಿದೆ. ಹೆಚ್ಚಿನ ಮಾಹಿತಿಗೆ ಮೊ.9901889652, 9901423745 ಅಥವಾ 96663832132 ಗೆ ಕರೆ ಮಾಡಬಹುದು ಎಂದು ಸಂಘದ ಪ್ರಕಟಣೆ ತಿಳಿಸಿದೆ.