ಸಾಲ್ಮರ ಪ್ರೌಢಶಾಲೆಯ ವಿದ್ಯಾರ್ಥಿ ಮಹಮದ್ ಮುಫೀಝ್ ಡಿಸ್ಕಸ್ ತ್ರೋ.ನಲ್ಲಿ ಜಿಲ್ಲಾಮಟ್ಟಕ್ಕೆ

0

ಪುತ್ತೂರು : ಸಾರ್ವಜನಿಕ ಶಿಕ್ಷಣ ಇಲಾಖೆಯ ಕ್ರೀಡಾಕೂಟದಲ್ಲಿ ಸಾಲ್ಮರ ಮೌಂಟನ್ ವ್ಯೂ ಶಿಕ್ಷಣ ಸಂಸ್ಥೆಯ ಅಧೀನದ ಸಾಲ್ಮರ ಕನ್ನಡ ಮಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿ ಮೊಹಮ್ಮದ್ ಮುಫೀಜ್ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆದ ಪುತ್ತೂರು ನಗರ ವಲಯ ಮಟ್ಟದ ಕ್ರೀಡಾಕೂಟದ ಡಿಸ್ಕಸ್ ತ್ರೋನಲ್ಲಿ ಪ್ರಥಮ ಮತ್ತು ಶಾಟ್‌ಪುಟ್‌ನಲ್ಲಿ ದ್ವಿತೀಯ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಸರಕಾರಿ ಪ್ರೌಢಶಾಲೆ ಹಿರೇಬಂಡಾಡಿಯಲ್ಲಿ ನಡೆದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಡಿಸ್ಕಸ್ ತ್ರೋ ಪ್ರಥಮ ಸ್ಥಾನ ಪಡೆದು ಮೂಡಬಿದ್ರೆಯಲ್ಲಿ ನಡೆಯುವ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

LEAVE A REPLY

Please enter your comment!
Please enter your name here