ಕಾಣಿಯೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಕಡಬ ಮತ್ತು ಗ್ರಾಮ ಪಂಚಾಯತ್ ಬೆಳಂದೂರು ಇವುಗಳ ಜಂಟಿ ಆಶ್ರಯದಲ್ಲಿ “ಮಹಿಳಾ ಉದ್ಯೋಗ ಸಬಲೀಕರಣ ಅಭಿಯಾನ” ಬೆಳಂದೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಗ್ರಾ.ಪಂ.ಅಧ್ಯಕ್ಷರಾದ ಪಾರ್ವತಿ ಮರಕ್ಕಡ, ಉಪಾಧ್ಯಕ್ಷರಾದ ಜಯಂತ ಅಬೀರ, ಸದಸ್ಯರಾದ ಉಮೇಶ್ವರಿ ಅಗಳಿ, ಲೋಹಿತಾಕ್ಷ ಕೆಡೆಂಜಿಕಟ್ಟ, ಗೀತಾ ಕುವೆತ್ತೋಡಿ, ಹರಿಣಾಕ್ಷಿ ಬನಾರಿ, ಪ್ರವೀಣ್ ಕೆರೆನಾರು, ತೇಜಾಕ್ಷಿ ಕೊಡಂಗೆ ಪಂಚಾಯತ್ ಪ್ರಭಾರ ಅಭಿವೃದ್ಧಿ ಅಧಿಕಾರಿ ನಾರಾಯಣ.ಕೆ ಪಂಚಾಯತ್ ಸಿಬ್ಬಂದಿಗಳಾದ ಮಮತ,ಹರ್ಷಿತ್, ಸಂತೋಷ್ ಉಪಸ್ಥಿತರಿದ್ದರು.