ಕಾಣಿಯೂರು: ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ಮತ್ತು ಶ್ರೀ ಕೇಪುಳೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಪ್ರಯುಕ್ತ ಪುತ್ತೂರು, ಕಡಬ, ಸುಳ್ಯ ತಾಲೂಕಿನ ಪ್ರತಿ ಮನೆಯಿಂದ ಒಂದು ಗೊನೆ ಅಡಿಕೆ ಸಂಗ್ರಹ ಮಾಡುವ ನಿಟ್ಟಿನಲ್ಲಿ ನಿಧಿ ಸಂಚಯನ ಕಾರ್ಯಕ್ರಮವು ಜ.7ರಂದು ನಡೆಯಲಿದ್ದು, ಕಾರ್ಯಕ್ರಮದ ಪೂರ್ವಭಾವಿಯಾಗಿ ತಾಲೂಕು ಹಾಗೂ ವಲಯವಾರು, ಗ್ರಾಮವಾರು ಪ್ರತಿನಿಧಿಗಳ ಸಭೆಯು ಬರೆಪ್ಪಾಡಿ ಕ್ಷೇತ್ರದಲ್ಲಿ ಅ.29ರಂದು ನಡೆಸಲಾಯಿತು. ಕಾರ್ಯಕ್ರಮದ ಆಮಂತ್ರಣವನ್ನು ನ.5ರಂದು ಬಿಡುಗಡೆಗೊಳಿಸಲು ತೀರ್ಮಾನಿಸಲಾಯಿತು.
ದೇವಸ್ಥಾನದ ಅನುವಂಶಿಯ ಮೊಕ್ತೇಸರರು, ಅರ್ಚಕ ಜನೇಶ್ ಭಟ್ ಬರೆಪ್ಪಾಡಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವಿಠಲ ಗೌಡ ಬರೆಪ್ಪಾಡಿ, ನಿಧಿ ಸಂಚಯ ಕಾರ್ಯಕ್ರಮದ ಪುತ್ತೂರು ತಾಲೂಕು ಸಮಿತಿ ಪ್ರಮುಖ ದಿನೇಶ್ ಮೆದು ಹಾಗೂ ವ್ಯವಸ್ಥಾಪನಾ ಸಮಿತಿ ಸದಸ್ಯರು, ಜೀರ್ಣೋದ್ಧಾರ ಸಮಿತಿ ಪದಾಧಿಕಾರಿಗಳು, ಸದಸ್ಯರು ಹಾಗೂ ಕುದ್ಮಾರು, ಕಾಯಿಮಣ, ಬೆಳಂದೂರು, ಸವಣೂರು, ಪುಣ್ಚಪ್ಪಾಡಿ, ಪಾಲ್ತಾಡಿ, ಕಾಣಿಯೂರು, ಚಾರ್ವಾಕ, ದೋಳ್ಪಾಡಿ ಗ್ರಾಮದ ಪ್ರಮುಖರು ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ಗಿರಿಶಂಕರ ಸುಲಾಯ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.