ಸಿಎಂ ಸಿದ್ಧರಾಮಯ್ಯರವರಿಂದ ಅಧಿಕಾರಿಗಳಿಗೆ ಭ್ರಷ್ಟಾಚಾರದ ವಿರುದ್ಧ ಪ್ರತಿಜ್ಞೆ ಬೋಧನೆ

0

ಬೆಂಗಳೂರು:ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಅಧಿಕಾರಿಗಳಿಗೆ ಭ್ರಷ್ಟಾಚಾರದ ವಿರುದ್ಧ ಪ್ರತಿಜ್ಞೆಬೋಧಿಸಿದ್ದಾರೆ.ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಜಾಗೃತಿ ಅರಿವು ಸಪ್ತಾಹ-2023ರ ಅಂಗವಾಗಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ(ಜಾಗೃತ ವಿಭಾಗ)ವತಿಯಿಂದ ಅ.30ರಂದು ಭ್ರಷ್ಟಾಚಾರದ ವಿರುದ್ಧ ಅಧಿಕಾರಿಗಳಿಗೆ ಪ್ರತಿಜ್ಞೆ ಬೋಧನೆ ನಡೆಯಿತು.ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರಾಜ್ಯ ಸರಕಾರದ ಎಲ್ಲಾ ಸಚಿವಾಲಯದ ಅಧಿಕಾರಿಗಳು ಮತ್ತು ನೌಕರರಿಗೆ ಭ್ರಷ್ಟಾಚಾರದ ವಿರುದ್ಧ ಪ್ರತಿಜ್ಞೆ ಬೋಧನೆ ಮಾಡಿದರು.


ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಝೀರ್ ಅಹ್ಮದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಸೇರಿದಂತೆ ಹಿರಿಯ ಅಧಿಕಾರಿಗಳು ಹಾಗೂ ನೌಕರರು ಉಪಸ್ಥಿತರಿದ್ದರು.


ಸುದ್ದಿ ಜನಾಂದೋಲನಕ್ಕೆ ಹೆಚ್ಚಿನ ಬಲ
ಲಂಚ,ಭ್ರಷ್ಟಾಚಾರದ ವಿರುದ್ಧ ಸುದ್ದಿ ಜನಾಂದೋಲನ ವೇದಿಕೆ ವತಿಯಿಂದ ಕಳೆದ ಕೆಲವು ಸಮಯದಿಂದ ನಿರಂತರ ಆಂದೋಲನ ನಡೆಯುತ್ತಿದ್ದು ಎಲ್ಲೆಡೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ.ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಸುದ್ದಿ ಜನಾಂದೋಲನ ವೇದಿಕೆ ಮುಖ್ಯಸ್ಥ ಡಾ.ಯು.ಪಿ.ಶಿವಾನಂದ ಅವರು, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಕ್ಷೇತ್ರ ವರುಣಾ ಮತ್ತು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಶಿಗ್ಗಾಂವಿ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಿ, ಲಂಚ ಭ್ರಷ್ಟಾಚಾರದ ವಿರುದ್ಧ ವ್ಯಾಪಕ ಪ್ರಚಾರ ಮಾಡಿ ಜಾಗೃತಿ ಉಂಟು ಮಾಡಿದ್ದು ಈ ಎರಡೂ ಕ್ಷೇತ್ರಗಳಲ್ಲಿಯೂ ಮತದಾರರಿಂದ ಉತ್ತಮ ಬೆಂಬಲ ವ್ಯಕ್ತವಾಗಿತ್ತು.ಇದೀಗ ಮುಖ್ಯಮಂತ್ರಿಯವರೇ ಅಽಕಾರಿಗಳಿಗೆ ಭ್ರಷ್ಟಾಚಾರದ ವಿರುದ್ಧ ಪ್ರತಿe ಬೋಽಸಿರುವುದು ಸುದ್ದಿಯ ಜನಾಂದೋಲನಕ್ಕೆ ಇನ್ನೂ ಹೆಚ್ಚಿನ ಬಲ ನೀಡಿದೆ.

LEAVE A REPLY

Please enter your comment!
Please enter your name here