ಡಿ.ಪಿ.ಆರ್, ಸಾಧ್ಯತಾ ವರದಿ ತಯಾರಿಸಲು ಟೆಂಡರ್ ಕರೆದ ರಾಷ್ಟ್ರೀಯ ಹೆದ್ದಾರಿ ಇಲಾಖೆ
ಪುತ್ತೂರು: ಸಂಸದ ನಳಿನ್ ಕುಮಾರ್ ಕಟೀಲ್ ಅವರ ಮನವಿಯ ಮೇರೆಗೆ ರಾಷ್ಟ್ರೀಯ ಹೆದ್ದಾರಿ ಇಲಾಖೆಯು ಬಹನಿರೀಕ್ಷಿತ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ-275ರ (ಮಾಣಿ-ಮೈಸೂರು-ಬೆಂಗಳೂರು ವಿಭಾಗದಲ್ಲಿ) ಕಿ.ಮೀ 0.00 ರಿಂದ ಕಿಮೀ 71.60ರವರೆಗಿನ ರಸ್ತೆಯ ಚತುಷ್ಪಥ ಕಾಮಗಾರಿಗೆ ವಿವರವಾದ ಯೋಜನಾ ವರದಿ (ಡಿ.ಪಿ.ಆರ್), ಕಾರ್ಯಸಾಧ್ಯತೆಯ ಅಧ್ಯಯನ, ಸಮೀಕ್ಷೆ ಮತ್ತು ಭೂ ಯೋಜನೆಯನ್ನು ಸಿದ್ಧಪಡಿಸಲು ಅರ್ಹ ಸಲಹೆಗಾರರಿಂದ ಟೆಂಡರ್ ಆಹ್ವಾನಿಸಿದೆ.
ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಸಾಣೂರುನಿಂದ ಬಿಕರ್ನಕಟ್ಟೆವರೆಗೆ ಹಾಗೂ ರಾಷ್ಟ್ರೀಯ ಹೆದ್ದಾರಿ 75 ಬಿಸಿರೋಡ್ ನಿಂದ ಅಡ್ಡಹೊಳೆ ವರೆಗಿನ ರಸ್ತೆಗಳ ಮೇಲ್ದರ್ಜೆ ಕಾಮಗಾರಿಗಳು ನಡೆಯುತ್ತಿರುವಾಗಲೇ ಇನ್ನೊಂದು ಪ್ರಮುಖ ಹೆದ್ದಾರಿಯೂ ಮೇಲ್ದರ್ಜೆಗೇರುತ್ತಿರುವುದು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪೂರಕವಾಗಲಿದೆ ಎಂದು ಸಂಸದರು ಅಭಿಪ್ರಾಯಪಟ್ಟಿದ್ದಾರೆ. ಸಂಸದ ನಳಿನ್ ಕುಮಾರ್ ಕಟೀಲ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಹಾಗೂ ಕೇಂದ್ರ ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿಯವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.