ಪುತ್ತೂರು: ಮೈಸೂರು ರಾಜ್ಯಕ್ಕೆ ಕರ್ನಾಟಕ ರಾಜ್ಯವೆಂದು ಮರು ನಾಮಕರಣಗೊಂಡು ಐವತ್ತು ವರ್ಷ ಸಂದ ಹಿನ್ನೆಲೆಯಲ್ಲಿ ಪುತ್ತೂರಿನಲ್ಲಿ ಕನ್ನಡ ಭುವನೇಶ್ವರಿಯ ಭವ್ಯ ಮೆರವಣಿಗೆ ನಡೆಯಿತು.
ಶಾಸಕ ಅಶೋಕ್ ಕುಮಾರ್ ರೈ ಕನ್ನಡ ಧ್ವಜಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು.ಈ ವೇಳೆ ಮಾಜಿ ಶಾಸಕ ಸಂಜೀವ ಮಠಂದೂರು, ಸಹಾಯಕ ಆಯುಕ್ತ ಗಿರೀಶ್ ನಂದನ್, ತಹಶಿಲ್ದಾರ್ ಶಿವಶಂಕರ್, ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಉಮೇಶ್ ನಾಯಕ್ ಸೇರಿದಂತೆ ಹಲವು ಗಣ್ಯರು ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದರು. ನಗರದ ಹಲವು ಶಾಲೆಗಳ ವಿದ್ಯಾರ್ಥಿಗಳು ಮೆರವಣಿಗೆಯಲ್ಲಿ ಪಾಲ್ಗೊಂಡರು. ದರ್ಬೆ ವೃತ್ತದಲ್ಲಿ ಆರಂಭಗೊಂಡ ಮೆರವಣಿಗೆ ಕಿಲ್ಲೆ ಮೈದಾನದವರೆಗೆ ತಲುಪಿ ಬಳಿಕ ಪುತ್ತೂರು ಆಡಳಿತ ಸೌಧದ ಮುಂಭಾಗದಲ್ಲಿ ಧ್ವಜಾರೋಹಣ ನಡೆಯಿತು.