ನೇರಳಕಟ್ಟೆ: ಆಂಬ್ಯುಲೆನ್ಸ್ – ಕಾರಿನ ನಡುವೆ ಅಪಘಾತ

0

ವಿಟ್ಲ: ಆಂಬ್ಯುಲೆನ್ಸ್ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ ಘಟನೆ ಮಾಣಿ ಸಮೀಪದ ನೇರಳಕಟ್ಟೆ ಎಂಬಲ್ಲಿ ನಡೆದಿದೆ.ಒಳ ರಸ್ತೆಯಿಂದ ಬಂದ ಬೈಕ್ ಸವಾರನನ್ನು ತಪ್ಪಿಸಲು ಯತ್ನಿಸಿದ ಕಾರು ಚಾಲಕ ಮಂಗಳೂರಿಗೆ ರೋಗಿಯೊಬ್ಬರನ್ನು ಕರೆದುಕೊಂಡು ಹೋಗುತ್ತಿದ್ದ ಆಂಬ್ಯುಲೆನ್ಸ್ ಗೆ ಡಿಕ್ಕಿಯಾಗಿದೆ. ಇದರಿಂದ ಎರಡು ವಾಹನಗಳು ಜಖಂಗೊಂಡಿದೆ.ಬಳಿಕ ಬೇರೆ ಆಂಬ್ಯುಲೆನ್ಸ್ ಮೂಲಕ ರೋಗಿಯನ್ನು ಮಂಗಳೂರಿಗೆ ಸ್ಥಳಾಂತರಿಸಲಾಯಿತು. ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಆಗಮಿಸಿ ಮಾಹಿತಿ ಸಂಗ್ರಹಿಸಿದ್ದಾರೆ.

LEAVE A REPLY

Please enter your comment!
Please enter your name here