ಈಶ್ವರಮಂಗಲ:ಹನುಮಗಿರಿ ಶ್ರೀ ಗಜಾನನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನ.1 ರಂದು ಕನ್ನಡ ರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ ಅತಿಥಿ ಶಾಲಾ ಶಿಕ್ಷಕಿ ರೇಖಾ. ಇ ದೀಪ ಪ್ರಜ್ವಲನೆಯ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಕರ್ನಾಟಕದ ಉಗಮದ ಮಹತ್ವವನ್ನು,ಕರ್ನಾಟಕದ ಉದ್ಭವವನ್ನು ಹಾಗೂ ಭಾಷೆಯ ಸೊಗಸನ್ನು ತಿಳಿಸಿದರು.
ಪ್ರಾಂಶುಪಾಲ ಕೆ ಶಾಮಣ್ಣ ಕರ್ನಾಟಕದ ಮಹತ್ವವನ್ನು ತಿಳಿಸಿ ಎಲ್ಲಾ ವಿದ್ಯಾರ್ಥಿಗಳಿಗೆ ಉತ್ತಮ ಪ್ರಜೆಗಳಾಗಲು ಹಾರೈಸಿದರು. ಸಂಚಾಲಕ ಶಿವರಾಮ ಪಿ ಇವರು ಕನ್ನಡ ಭಾಷೆಗೆ ಹೆಚ್ಚು ಪ್ರಾಮುಖ್ಯತೆಯನ್ನು ನೀಡಬೇಕೆಂದು ಹೇಳಿದರು. ಶಾಲಾ ವಿದ್ಯಾರ್ಥಿನಿಯರು ನಾಡಗೀತೆ ಹಾಡಿದರು.ಕನ್ನಡದ ಕುರಿತಾದ ಪ್ರಶ್ನೆಗಳನ್ನು ಕೇಳಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ನೀಡಲಾಯಿತು. ಶಾಲಾ ಶಿಕ್ಷಕಿ ವಿಜಯಲಕ್ಷ್ಮಿ ಸ್ವಾಗತಿಸಿ ,ಗುರುವಾಯುರಪ್ಪ ವಂದಿಸಿ, ಧನಲಕ್ಷ್ಮಿ ಕಾರ್ಯಕ್ರಮವನ್ನು ನಿರೂಪಿಸಿದರು.ಸಭಾ ಕಾರ್ಯಕ್ರಮದ ನಂತರ ಸಾಂಸ್ಕೃತಿಕ ಕಾರ್ಯಕ್ರಮ ಜರಗಿತು.