ಪುತ್ತೂರು: ಅ.29ರಂದು ಕನ್ನಡ ಸಾಹಿತ್ಯ ಪರಿಷತ್ ಮಾಜಿ ರಾಜ್ಯಾಧ್ಯಕ್ಷರಾದ ಧರ್ಮದರ್ಶಿ ಹರಿಕೃಷ್ಣ ಪುನರೂರುರವರ ಅಧ್ಯಕ್ಷತೆಯಲ್ಲಿ ಮಂಗಳೂರಿನ ಪುರಭವನದಲ್ಲಿ ಪಿ.ವಿ.ಪ್ರದೀಪ್ ಕುಮಾರ್ ಅವರ ಕಥಾಬಿಂದು ಪ್ರಕಾಶನದ ಆಶ್ರಯದಲ್ಲಿ ನಡೆದ ಸಾಹಿತ್ಯೋತ್ಸವ ಮತ್ತು 50 ಕೃತಿಗಳ ಲೋಕಾರ್ಪಣೆ ಸಮಾರಂಭದಲ್ಲಿ ಬೊಳುವಾರು ನಿವಾಸಿ ಕಬಕ ಸರಕಾರಿ ಪ್ರೌಢಶಾಲೆ ಶಿಕ್ಷಕಿ ಶಾಂತಾ ಪುತ್ತೂರು ಅವರಿಗೆ ಸಾಹಿತ್ಯ ಸಿರಿ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಕಥಾಬಿಂದು ಪ್ರಕಾಶನದ ಪಿ.ವಿ.ಪ್ರದೀಪ್ ಕುಮಾರ್, ಕಾಸರಗೋಡು ಕನ್ನಡ ಭವನದ ಅಧ್ಯಕ್ಷ ವಾಮನ್ ರಾವ್ ಬೇಕಲ್, ಹಿರಿಯ ಸಾಹಿತಿ ರಾಧಾಕೃಷ್ಣ ಕೆ ಉಳಿಯತ್ತಡ್ಕ, ದ.ಕ.ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷ ಪ್ರವೀಣ್ ಕುಮಾರ್ ಕೊಡಿಯಾಲ್ ಬೈಲ್, ಹಿರಿಯ ಸಾಹಿತಿ ಜಯಾನಂದ ಪೆರಾಜೆ, ಪಿಂಗಾರ ಪತ್ರಿಕೆ ಸಂಪಾದಕ ರೇಮಂಡ್ ಡಿಕುನ್ಹ ತಾಕೋಡೆ, ಮಂಗಳೂರು ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್, ಡಾ.ಕೊಳ್ಚಪ್ಪೆ ಗೋವಿಂದ ಭಟ್, ಸಂತೋಷ್ ಕುಮಾರ್ ಹೆಗಡೆ, ಕವಯಿತ್ರಿ ರೇಖಾಸುದೇಶ್ ರಾವ್, ವೀಣಾಕಾರಂತ್ ಉಪಸ್ಥಿತರಿದ್ದರು.