ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಗೆ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಪ್ರಶಸ್ತಿ

0

ಕಾಣಿಯೂರು: ಅ30, 31ರಂದು ಮೂಡಬಿದ್ರೆಯ ಸ್ವರಾಜ್ ಮೈದಾನದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರೌಢಶಾಲಾ ವಿಭಾಗದ 400 ಮೀ ಓಟದಲ್ಲಿ ರೂಪೇಶ್ ರೈ ಎಂ ತೃತೀಯ ಸ್ಥಾನ ಹಾಗೂ ಪ್ರಾಥಮಿಕ ವಿಭಾಗದ ವಿಕಾಸ್ 400 ಮೀ ಓಟದಲ್ಲಿ ತೃತೀಯ ಸ್ಥಾನವನ್ನು ಪಡೆದಿದ್ದಾರೆ.


ಅ 26, 27 ರಂದು ಸರಕಾರಿ ಪ್ರೌಢಶಾಲೆ ಹಿರೆಬಂಡಾಡಿಯಲ್ಲಿ ನಡೆದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಪ್ರಗತಿ ವಿದ್ಯಾ ಸಂಸ್ಥೆಯ ಪ್ರೌಢಶಾಲಾ ವಿಭಾಗದ ರೂಪೇಶ್ ರೈ ಎಂ 400 ಮೀ ಮತ್ತು 800 ಮೀ ಓಟದಲ್ಲಿ ದ್ವಿತೀಯ ಸ್ಥಾನ, ಜಿತೇಶ್ ಸಿ ತ್ರಿವಿಧ ಜಿಗಿತದಲ್ಲಿ ತೃತೀಯ ಸ್ಥಾನ, ಮೊಹಮ್ಮದ್ ರಿಜ್ವಾನ್ ಎತ್ತರ ಜಿಗಿತದಲ್ಲಿ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ. ಪ್ರಾಥಮಿಕ ವಿಭಾಗದಲ್ಲಿ ವಿಕಾಸ್ 400 ಮೀ ಮತ್ತು 600 ಮೀ ಓಟದಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.
ಇವರನ್ನು ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಜಗನ್ನಾಥ ರೈ ನುಳಿಯಾಲು, ಶಾಲಾ ಸಂಚಾಲಕರಾದ ಜಯಸೂರ್ಯ ರೈ ಮಾದೋಡಿ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಉಮೇಶ್ ಕೆ ಎಂ ಬಿ, ಶಾಲಾ ಆಡಳಿತಾಧಿಕಾರಿ ವಸಂತ ರೈ ಕಾರ್ಕಳ, ಮುಖ್ಯಗುರು ಸರಸ್ವತಿ ಎಂ ಮತ್ತು ಎಲ್ಲಾ ಶಿಕ್ಷಕ ವೃಂದದವರು ಅಭಿನಂದಿಸಿದರು. ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕರಾದ ಜಯಚಂದ್ರ ಮತ್ತು ವನಿತಾ ತರಬೇತಿ ನೀಡಿರುತ್ತಾರೆ.

LEAVE A REPLY

Please enter your comment!
Please enter your name here