ನಿಡ್ಪಳ್ಳಿ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

0

ನಿಡ್ಪಳ್ಳಿ: ದ.ಕ.ಜಿ.ಪಂ ಹಿರಿಯ ಪ್ರಾಥಮಿಕ ಶಾಲೆ ನಿಡ್ಪಳ್ಳಿ ಇಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು. ಕನ್ನಡಾಂಬೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ  ಶಾಲಾ ಹಿರಿಯ ಶಿಕ್ಷಕಿ ಪುಷ್ಪರವರು ಕನ್ನಡ ರಾಜ್ಯೋತ್ಸವ ಆಚರಣೆ ಬಗ್ಗೆ ಸಂಕ್ಷಿಪ್ತವಾಗಿ ಮಾತನಾಡಿದರು.ಶಾಲಾ ವಿದ್ಯಾರ್ಥಿಗಳು ಕನ್ನಡ ಹಾಡುಗಳನ್ನು ಹಾಡಿದರು.

ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಕರುಣಾಕರ ರೈ ಮುಂಡೂರು ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷೆ ಶಾಲಿನಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಅತಿಥಿ ಶಿಕ್ಷಕಿ ಕಾವ್ಯಶ್ರೀ ಸ್ವಾಗತಿಸಿ, ಮುಖ್ಯ ಗುರು ಹೇಮಾ.ಎನ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕಿಯರಾದ ದೀಪ, ಕುಸುಮ ಸಿ.ಎಚ್ ವಂದಿಸಿದರು. ಅತಿಥಿ ಶಿಕ್ಷಕಿ ಸುಮ.ಡಿ ಕಾರ್ಯಕ್ರಮ ನಿರೂಪಿಸಿದರು. ಎಸ್.ಡಿ.ಎಂ.ಸಿ ಸದಸ್ಯರು, ಪೋಷಕರು, ವಿದ್ಯಾರ್ಥಿಗಳು ಪಾಲ್ಗೊಂಡರು.

LEAVE A REPLY

Please enter your comment!
Please enter your name here