ನೆಲ್ಯಾಡಿ ಬೆಥನಿ ವಿದ್ಯಾಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

0

ನೆಲ್ಯಾಡಿ: ನೆಲ್ಯಾಡಿ ಜ್ಞಾನೋದಯ ಬೆಥನಿ ವಿದ್ಯಾಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಕರ್ನಾಟಕ ಪತಾಕೆಯನ್ನು ಆರಿಸಿ ಕನ್ನಡ ವೈಭವವನ್ನು ಸಾರುವ ಸಂದೇಶವನ್ನು ನೀಡುವುದರ ಮೂಲಕ ಆಚರಿಸಲಾಯಿತು.


ತಾಯಿ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ಬಳಿಕ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸ್ಥೆಯ ಮುಖ್ಯಸ್ಥರಾದ ರೆ.ಫಾ.ತೋಮಸ್ ಬಿಜಿಲಿ ಒಐಸಿಯವರು ಕನ್ನಡಿಗರು ನಾಡು ನುಡಿ ಸಂಸ್ಕೃತಿಯನ್ನು ಉಳಿಸಿಕೊಳ್ಳಬೇಕು. ಈ ಕೆಲಸವನ್ನು ವಿದ್ಯಾರ್ಥಿಗಳು ಮಾಡಬೇಕೆಂದು ಹೇಳಿದರು. ಮುಖ್ಯ ಅತಿಥಿಯಾಗಿದ್ದ ಶ್ರೀ ರಾಮಕುಂಜೇಶ್ವರ ಮಹಾವಿದ್ಯಾಲಯದ ಪ್ರಾಂಶುಪಾಲ ಗಣರಾಜ್ ಕುಂಬ್ಳೆಯವರು ಅಭಿಮಾನದಿಂದ ನಾನು ಕನ್ನಡಿಗನೆಂದು ಹೇಳಿಕೊಳ್ಳಬೇಕು. ನಮ್ಮಲ್ಲಿ ಭಾವೈಕ್ಯತೆಯನ್ನು ಬೆಳೆಸಿಕೊಳ್ಳಬೇಕು. ನಾಡಿನ ಸಾಹಿತ್ಯ, ಇತಿಹಾಸವನ್ನು ತಿಳಿದುಕೊಂಡು ಜ್ಞಾನವನ್ನು ಬೆಳೆಸಿಕೊಳ್ಳಬೇಕೆಂದು ಹೇಳಿದರು. ಉಪಪ್ರಾಂಶುಪಾಲರಾದ ಜೋಸ್ ಎಂ.ಜೆ., ಜಾರ್ಜ್ ಕೆ.ತೋಮಸ್, ಜೋಸ್ ಕೆ ಪ್ರಕಾಶ್‌ರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಧನ್ವಿ ಸುಧೀರ್ ನಿರೂಪಿಸಿದರು. ಅಶ್ವಿನಿ ಸ್ವಾಗತಿಸಿ, ಸಾನ್ವಿ ವಂದಿಸಿದರು. ಕನ್ನಡ ಸಾಹಿತ್ಯ ಸಂಘದ ವಿದ್ಯಾರ್ಥಿಗಳಿಂದ ವಿವಿಧ ಕಾರ್ಯಕ್ರಮ ನಡೆಯಿತು.

LEAVE A REPLY

Please enter your comment!
Please enter your name here